ಹಾವೇರಿ

ಸುದ್ದಿ ಸಂಕ್ಷೇಪ

Published On :

ಇಂದು ಪದಗ್ರಹಣ, ಬೀಳ್ಕೊಡುಗೆ ಸಮಾರಂಭ
ಹಾವೇರಿ: ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಜಿಲ್ಲಾ ಶಾಖೆಗೆ 2013-18ರ ಅವಧಿಗೆ ಆಯ್ಕೆಗೊಂಡ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರ ಪದಗ್ರಹಣ ಹಾಗೂ ಹಿಂದಿನ ಅವಧಿಗೆ ಸೇವೆ ಸಲ್ಲಿಸಿದ ಪದಾಧಿಕಾರಿಗಳ ಬೀಳ್ಕೊಡುಗೆ ಸಮಾರಂಭ ಆ. 28ರಂದು ಸಂಜೆ 5.30ಕ್ಕೆ ನಗರದ ಜಿಲ್ಲಾ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜರುಗಲಿದೆ. ಹುಕ್ಕೇರಿಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಬಿ. ಕಿನ್ನಾಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್.ಬಿ. ವಿಶ್ವಬ್ರಾಹ್ಮಣ ಭಾಗವಹಿಸುವರು. ಇದೇ ಸಂದರ್ಭದಲ್ಲಿ ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶಿವರಾಜ ದುಂದೂರ, ಶಿರಸ್ತೇದಾರ ಬಿ.ಶ್ರೀನಿವಾಸ, ಎಂ.ಎಚ್. ಕಡಕೋಳ, ಎಚ್.ಬಿ. ಹತ್ತಿಮತ್ತೂರ, ಬಿ.ಎಸ್. ಶಿಡೇನೂರ ಅವರನ್ನು ಸನ್ಮಾನಿಸಲಾಗುವುದೆಂದು ಅಧ್ಯಕ್ಷ ಎಸ್.ಬಿ. ಕಿನ್ನಾಳ ತಿಳಿಸಿದ್ದಾರೆ.
ಶಿಕ್ಷಕರ ಸಮಸ್ಯೆ ಬಗೆಹರಿಸಲು ಶಿಕ್ಷಣ ಅದಾಲತ್ ಸಹಾಯಕ
ಹಿರೇಕೆರೂರು: ಶಿಕ್ಷಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಅವುಗಳನ್ನು ಪರಿಹರಿಸಿದಾಗ ಅವರಿಂದ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಣ ಅದಾಲತ್ ಪೂರಕವಾಗಿದೆ ಎಂದು ಮಾಧ್ಯಮಿಕ ಶಾಲಾ ನೌಕರರ ಸಂಘದ ಮುಖಂಡ ಎಂ.ಬಿ. ಸಾವಜ್ಜಿಯವರ ತಿಳಿಸಿದರು. ಅವರು ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಏರ್ಪಡಿಸಿದ್ದ ಶಿಕ್ಷಣ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಅದಾಲತ್ ಶೈಕ್ಷಣಿಕ ಕಾರ್ಯಗಳು ಸಮಯೋಚಿತವಾಗಿ ಸಾಗುವಲ್ಲಿ ಶಿಕ್ಷಕರ ಪಾತ್ರ ಅಮೋಘವಾಗಿದೆ. ಶಿಕ್ಷಕರು ಸಮಸ್ಯೆ ರಹಿತವಾಗಿದ್ದಾಗ ಮಾತ್ರ ಅದು ಯಶಸ್ವಿಯಾಗುವಲ್ಲಿ ಸಂದೇಹವಿಲ್ಲ. ಶಿಕ್ಷಣ ಅದಾಲತ್ ವಿನೂತನ ಕಾರ್ಯಕ್ರಮವಾಗಿದೆ. ಶಿಕ್ಷಕರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸ ಲು ಸಹಾಯಕವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಅನಂದ ಶಿಕ್ಷಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಚರ್ಚಿಸಿ ಪರಿಶೀಲಿಸಿ ಪರಿಹರಿಸಲು ಮತ್ತು ನೇರ ಸಂವಾದದ ಮೂಲಕ ಶೈಕ್ಷಣಿಕ ಚಟುವಟಿಕೆ ಪರಿಣಾಮಕಾರಿಯಾಗಿ ನಡೆಯುವಂತಾಗಲು ಶಿಕ್ಷಣ ಅದಾಲತ್ ಕಾರ್ಯಕ್ರಮ ಜಾರಿಗೆ ಬಂದಿದೆ. ಇದರ ಮೂಲಕ ಶಿಕ್ಷಕರ ಸಮಸ್ಯೆ ಮತ್ತಿತರ ತೊಂದರೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ಶಿಕ್ಷಣ ಅದಾಲತ್ ಕಾರ್ಯಕ್ರಮ ಪೂರಕವಾಗಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಬಿದರಿ, ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷ ಯು.ಎಚ್. ಬಿದರಿ, ಜೆ.ಬಿ. ಮರಿಗೌಡ್ರ, ಕಾರ್ಯದರ್ಶಿ ಆರ್.ಬಿ. ಹಿರೇಕೆರೂರು, ಆರ್.ಎಸ್. ಹಾರನಹಳ್ಳಿ, ವಿ.ಎಚ್. ಕೋರಿ ಮೊದಲಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.