ಹಾವೇರಿ

ಅಯೋಧ್ಯಾ: ನಿಷೇಧಾಜ್ಞೆ ತೆರವಿಗೆ ಆಗ್ರಹ

Published On :

ರಾಣಿಬೆನ್ನೂರು: ಅಯೋಧ್ಯಾ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭಕ್ತಾದಿಗಳು, ಯಾತ್ರಾರ್ಥಿಗಳು ಭೇಟಿ ನೀಡದಂತೆ ವಿಧಿಸಿರುವ ನಿಷೇಧಾಜ್ಞೆ ತೆರವುಗೊಳಿಸಬೇಕು ಎಂದು ಆಗ್ರಹಿಸಿ, ತಾಲೂಕು ಬಿಜೆಪಿ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಪೋಸ್ಟ್ ಸರ್ಕಲ್‌ನಲ್ಲಿ ಸೇರಿದ್ದ ತಾಲೂಕು ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡದಿರುವ ಹಾಗೂ ದೇಶದ ವಿವಿಧ ರಾಜ್ಯಗಳಿಂದ ಅಯೋಧ್ಯೆ ವರೆಗೆ ಭಕ್ತರು ಕೈಗೊಳ್ಳಲ್ಲಿರುವ ಯಾತ್ರೆಗೆ ಪರವಾನಗಿ ನೀಡದೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಮತ್ತು ಅಯೋಧ್ಯೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಿರುವ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಶ್ವ ಹಿಂದೂ ಪರಿಷತ್ ತಾಲೂಕು ಕಾರ್ಯದರ್ಶಿ ಶಿವಶಂಕರ ಕೆಂಡದಮಠ ಮಾತನಾಡಿ, ದೇಶದ ಸಮಸ್ತ ಹಿಂದೂಗಳ ಆರಾಧ್ಯದೈವವಾದ ರಾಮನು ಜನಿಸಿರುವ ಅಯೋಧ್ಯೆಗೆ ಹಿಂದೂಗಳು ತೆರಳದಂತೆ, ಉತ್ತರ ಪ್ರದೇಶ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿ ದೇಶದ ಸಮಸ್ತ ಹಿಂದೂಗಳನ್ನು ಅವಮಾನಿಸಿದೆ. ತಕ್ಷಣ ಈ ನಿಷೇಧಾಜ್ಞೆ ತೆರವುಗೊಳಿಸಿ ಸಮಸ್ತ ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಸರ್ಕಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ಅಶೋಕ ನಾಡಿಗೇರ ಮಾತನಾಡಿ, ರಾಮ ಮಂದಿರ ನಿರ್ಮಿಸಲು ಏಕೆ ಅವಕಾಶ ನೀಡಿಲ್ಲ? ಯಾತ್ರಾರ್ಥಿಗಳಿಗೆ ಪ್ರವೇಶ ನೀಡುವ ಬದಲು ನಿಷೇಧಾಜ್ಞೆ ವಿಧಿಸಲು ಕಾರಣವೇನು? ಎಂಬುದನ್ನು ಕೇಂದ್ರ ಸರ್ಕಾರ ದೇಶದ ಸಮಸ್ತ ಜನತೆಗೆ ತಿಳಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು. ತಹಸೀಲ್ದಾರ್ ಶಿವಕುಮಾರ್ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಓಲೇಕಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ವಾಸಣ್ಣ, ಪ್ರಕಾಶ ಮಣಿಗಾರ, ಸಂತೋಷ ನಾಯ್ಕ, ವಿನಾಯಕ ಶಿಕಾರಿಪುರ, ಸುನೀಲ್ ಭೂತೆ, ನಾರಾಯಣಸಾ ಭೂತೆ, ಎಬಿವಿಪಿ ರಾಜ್ಯ ಕಾರ್ಯಕಾರಣಿ ಆನಂದ ದೇಶಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.