ವಿಷ ಆಹಾರ: ಕ್ರಮಕ್ಕೆ ಆಗ್ರಹ
ಹಾವೇರಿ: ಹಿಂದುಳಿದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಳ್ಳಲು ಕಾರಣರಾದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾವೇರಿ ನಗರ ಶಾಖೆ ಕಾರ್ಯಕರ್ತರು ಬುಧವಾರ ಜಿಲ್ಲಾ ಬಿಎಂಸಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಆ. 27ರಂದು ಸಂಜೆ 7.30ರ ಸುಮಾರಿಗೆ ಆಹಾರ ಸೇವಿಸಿ 16 ವಿದ್ಯಾರ್ಥಿನಿಯರು ವಾಂತಿ-ಭೇದಿಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದಾಗ್ಯೂ, ಘಟನಾ ಸ್ಥಳಕ್ಕಾಗಲಿ, ಆಸ್ಪತ್ರೆಗಾಗಲಿ ವಾರ್ಡ್ನ ವನಿತಾ ಸುಂಕದ ಹಾಗೂ ತಾಲೂಕಾಧಿಕಾರಿ ಬದ್ದನೂರ ಭೇಟಿ ನೀಡದೇ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಕಾರ್ಯಕರ್ತರು ದೂರಿದರು.
ವಿದ್ಯಾರ್ಥಿನಿಯರು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎಂಬ ಸುದ್ದಿ ತಿಳಿದು ಅನೇಕ ಪಾಲಕರು ವಾರ್ಡ್ನ ಹಾಗೂ ತಾಲೂಕಾಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿಷಯ ತಿಳಿದುಕೊಳ್ಳಲು ಯತ್ನಿಸಿದವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಲಾಯಿತು. ಆದ್ದರಿಂದ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ತಕ್ಷಣ ಇಲ್ಲಿಂದ ಬೇರೆಡೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಬಿಸಿಎಂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಜಿಲ್ಲಾ ಬಿಸಿಎಂ ಅಧಿಕಾರಿ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದು ಮದರಖಂಡಿ, ದೀಪಕ್ ಹೆಬ್ಬಲಿ, ಪುಟ್ಟರಾಜ, ಬಸವರಾಜ, ತಾಲೂಕು ಸಂಚಾಲಕ ನಾಗರಾಜ ಹುರಳಿಕುಪ್ಪಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

