ಹಾವೇರಿ

ಸೇವಾ ಮನೋಭಾವ ಬೆಳೆಸಿಕೊಳ್ಳಿ: ಬೇಲೂರು

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಆ. 29
ಮಾನವನ ರಕ್ಷಣೆ ಹಾಗೂ ಘನತೆ ಗೌರವ ಕಾಪಾಡುವುದು, ಸಂಕಷ್ಟದಲ್ಲಿದ್ದವರನ್ನು ಉಪಚರಿಸುವುದು, ನಿರ್ಗತಿಕರಿಗೆ, ರೋಗಿಗಳಿಗೆ, ವಿಕಲಚೇತನರಿಗೆ ಕೈಲಾದಷ್ಟು ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಗದಗ ನಗರಸಭೆ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ಕೆ.ಎಚ್. ಬೇಲೂರ ಹೇಳಿದರು.
ಗುರುವಾರ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಸಂಸ್ಥೆಯ 150ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಜಗತ್ತಿನ ಕಲ್ಯಾಣದ ಬಗ್ಗೆ ವಿಚಾರ ಮಾಡುತ್ತಾ ಸ್ಥಾನಿಕವಾಗಿ ಕೆಲಸ ಮಾಡುವ, ಪ್ರಕೃತಿ ವಿಕೋಪ ಪರಿಹಾರ ಕಾರ್ಯಚಟುವಟಿಕೆಯಲ್ಲಿ ಸೇವೆ ಮಾಡುವ ಯುವಕರ ಪಡೆ ನಿರ್ಮಾಣ ರೆಡ್‌ಕ್ರಾಸ್ ಸಂಸ್ಥೆಯ ಉದ್ದೇಶಗಳಲ್ಲೊಂದಾಗಿದೆ.
ಮಾನವ ಸಂಬಂಧಗಳು ಹಳಸುತ್ತಿರುವ ಈಗಿನ ಸಮಾಜದಲ್ಲಿ ಅಪ್ಪ, ಅಮ್ಮ ಸಂಬಂಧಿಕರನ್ನು ಕಳೆದುಕೊಂಡ ಜನತೆಯ ಕಣ್ಣೀರೊರೆಸುವ ತರುಣರ ಸಂಘಗಳು ಆವಶ್ಯಕ. ಯುವಕರು ಸಮರ್ಪಣಾ ಮನೋಭಾವ ಬೆಳೆಸಿಕೊಂಡರೆ ಮಾತ್ರ ಮನುಷ್ಯರ ಕ್ರೂರ ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದು ಬೇಲೂರ ಅಭಿಪ್ರಾಯಪಟ್ಟರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಎಸ್.ಕೆ. ನಾಶಿ ಅಧ್ಯಕ್ಷತೆ ವಹಿಸಿದ್ದರು. ಲಕ್ಷ್ಮಿ ಮೇಲ್ಮರಿ ಮತ್ತು ರೋಹಿಣಿ ಹಿರೇಮಠ ಪ್ರಾರ್ಥಿಸಿದರು.
ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ಪ್ರೊ. ಹಬೀಬ್ ಖತೀಬ್ ಅತಿಥಿಗಳನ್ನು ಪರಿಚಯಿಸಿದರು. ಮಂಜು ನಾಯಕ ಸ್ವಾಗತಿಸಿದರು. ಯುವ ರೆಡ್‌ಕ್ರಾಸ್ ಘಟಕಾಧಿಕಾರಿ ಪ್ರೊ. ಗೀತಾ ಮಂಕಣಿ ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದರು.
ಕೃಪಾ ಇಂಗಳೆ ನಿರೂಪಿಸಿದರು. ಮಂಜುಳಾ ಬೆಲ್ಲಾರ ವಂದಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಈಶ್ವರಲಾಲ ಸೇಡಂಕರ, ಪ್ರೊ. ದೀಪಕ ಕೊಲ್ಹಾಪುರೆ, ಡಾ. ವಿ.ಡಿ. ಯಳಮಲಿ, ಪ್ರೊ. ಎಂ.ಸಿ.  ಶಶಿಕಲಾ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.