ಹಾವೇರಿ

ಸೇವೆ ಗುರುತಿಸಿ: ರಾಮಗಿರಿ

Published On :

ಶಿಗ್ಗಾಂವಿ: ಸಮುದಾಯದ ಹಿತಕ್ಕಾಗಿ ಶ್ರಮಿಸುವ ವ್ಯಕ್ತಿಗಳ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹಾವೇರಿ ಜಿಲ್ಲಾ ಸಹಕಾರಿ ಸಂಘಗಳ ಒಕ್ಕೂಟದ ನಿರ್ದೇಶಕ ಶಿವಾನಂದ ರಾಮಗಿರಿ ನುಡಿದರು.
ಶಿಗ್ಗಾವಿಯ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮಾಜಿ ಸಂಸದ ಮಂಜುನಾಥ ಕುನ್ನೂರ ಅವರ 59ನೇ ಜನ್ಮದಿನ ಸಮಾರಂಭ ಉದ್ಘಾಟಿಸಿದ ಅವರು, ಶಿಕ್ಷಣ ಕ್ಷೇತ್ರದ ಪ್ರಗತಿಗಾಗಿ ಕುನ್ನೂರ ಕುಟುಂಬ ಅವಿರತ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಾರುತಿ ಶಿಡ್ಲಾಪುರ, ಸಮಾಜಮುಖಿ ಸೇವೆ ಸಲ್ಲಿಸುತ್ತಿರುವವರು ಪ್ರಶಂಸೆಗಿಂತ ಟೀಕೆಗಳನ್ನೆ ಹೆಚ್ಚು ಎದುರಿಸಬೇಕಾಗುತ್ತದೆ. ಒಳ್ಳೆಯದನ್ನು ಸ್ವೀಕರಿಸದೆ ಬಾರದ್ದನ್ನು ಎರಚಿ ಅಂದಗೆಡಿಸುವ ಸಾಮಾಜಿಕ ವ್ಯವಸ್ಥೆ ಸಾಂಸ್ಕೃತಿಕ ಅಧಃಪತನದ ದ್ಯೋತಕವಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಎಸ್.ಜಿ. ಭತ್ತದ, ಮುಖ್ಯಶಿಕ್ಷಕ ಸಿ.ಬಿ. ಕುನ್ನೂರ, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸಿ.ಟಿ. ಪಾಟೀಲ, ಕಿವುಡ-ಮೂಕ ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯ ಎಂ.ಬಿ. ನೀರಲಗಿ ಮಾತನಾಡಿದರು.
ವೀರಣ್ಣ ಬಡ್ಡಿ, ಶಿವಪುತ್ರಪ್ಪ ಜಕ್ಕಣ್ಣವರ, ಎಚ್.ಎಸ್. ಹಲಸೂರ, ರವಿ ಮಹಾಂತಶೆಟ್ಟರ ಪಾಲ್ಗೊಂಡಿದ್ದರು. ಜಿ.ಎಂ. ಅರಗೋಳ ಸ್ವಾಗತಿಸಿದರು. ಕೆ. ಎಸ್. ಬರದೆಲಿ ವಂದಿಸಿದರು. ಕೆ. ಬಸಣ್ಣ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.