ಶರಣ ಸಾಹಿತ್ಯ ಸಮ್ಮೇಳನ: ಇಂದು ಪೂರ್ವಭಾವಿ ಸಭೆ
ಹಾವೇರಿ: ಧಾರವಾಡದಲ್ಲಿ ಅಖಿಲ ಭಾರತ 11ನೇ ಶರಣ ಸಾಹಿತ್ಯ ಸಮ್ಮೇಳನ ಡಿ. 27ರಿಂದ ಮೂರು ದಿನ ನಡೆಯಲಿದ್ದು, ಜಿಲ್ಲೆಯಲ್ಲಿ ಸಂಘಟನಾ ಸಭೆಗಳನ್ನು ಪರಿಷತ್ತು ಆಯೋಜಿಸಿದೆ. ಡಿ. 4ರಂದು ಮಧ್ಯಾಹ್ನ 12 ಗಂಟೆಗೆ ಹಿರೇಕೆರೂರು ತಾಪಂ ಸಭಾಭವನ, ಮಧ್ಯಾಹ್ನ 3.30ಕ್ಕೆ ರಾಣಿಬೆನ್ನೂರಿನ ಆದಿಶಕ್ತಿ ಸಭಾಭವನ ಹಾಗೂ ಸಂಜೆ 6.30ಕ್ಕೆ ಹಾನಗಲ್ ತಾಲೂಕು ಅಕ್ಕಿಆಲೂರಿನ ಚನ್ನವೀರೇಶ್ವರ ಪ್ರಸಾದ ನಿಲಯದಲ್ಲಿ ಸಭೆಗಳು ಆಯಾ ತಾಲೂಕು ಘಟಕಗಳ ಆಶ್ರಯದಲ್ಲಿ ನಡೆಯುತ್ತವೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ್ಷ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷ ಅಪ್ಪಾರಾವ್ ಅಕ್ಕೋಣಿ, ಕಾರ್ಯದರ್ಶಿ ಶ್ರೀಶೈಲ ಪಟ್ಟಣಶೆಟ್ಟಿ ಪಾಲ್ಗೊಳ್ಳುವರು ಎಂದು ಪರಿಷತ್ ಜಿಲ್ಲಾಧ್ಯಕ್ಷ ಹನುಮಂತಗೌಡ ಗೊಲ್ಲರ ತಿಳಿಸಿದ್ದಾರೆ.
ನಾಳೆ ಕಾನೂನು ಸಾಕ್ಷರತೆ
ಹಾವೇರಿ: ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಡಿ. 5ರಂದು ಬೆಳಗ್ಗೆ 9.30ಕ್ಕೆ ನಗರದ ಹೊಸಮಠದ ಎಸ್.ಜೆ.ಎಂ. ಅಂಗವಿಕಲರ ಪ್ರೌಢಶಾಲೆಯಲ್ಲಿ ಜರುಗಲಿದೆ. ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎನ್.ಎಸ್. ಪಾಟೀಲ ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಮಾಳಗೇರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ, ಕಾರ್ಯದರ್ಶಿ ಎಸ್.ಎಸ್. ಹಿರೇತನದ ಭಾಗವಹಿಸುವರು. ಸಿಡಿಪಿಒ ಲಲಿತಾ ಡಿ.ಎಚ್. ವಿಕಲಚೇತನರ ಹಕ್ಕು-ಕರ್ತವ್ಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.
ಹೇರೂರ ನಿಧನ: ಸಂತಾಪ
ಹಾವೇರಿ: ವಿಧಾನ ಪರಿಷತ್ನ ಮಾಜಿ ಮುಖ್ಯ ಸಚೇತಕ, ಹಾವೇರಿ ಜಿಲ್ಲೆ ನರಸೀಪುರದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಸಂಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರಾಗಿದ್ದ ವಿಠ್ಠಲ ಹೇರೂರ ನಿಧನಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಸಂಘದ ಜಿಲ್ಲಾ ಘಟಕ ಸಂತಾಪ ಸೂಚಿಸಿದೆ. ನಗರದಲ್ಲಿ ಮಂಗಳವಾರ ನಡೆದ ಸಂತಾಪ ಸೂಚಕ ಸಭೆಯಲ್ಲಿ ಪಾಲ್ಗೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಬಾರ್ಕಿ, ತಾಲೂಕು ಅಧ್ಯಕ್ಷ ಮಂಜುನಾಥ ಸುಣಗಾರ, ಪ್ರಧಾನ ಕಾರ್ಯದರ್ಶಿ ಸುರೇಶ ಶಿವಣ್ಣನವರ, ಖಜಾಂಚಿ ರಮೇಶ ಗುಳೇದ, ಪ್ರಕಾಶ ಅಂಬಿಗೇರ, ಶಂಭು ಸಕ್ರಣ್ಣನವರ, ಕೃಷ್ಣಮೂರ್ತಿ ವಡ್ನಿಕೊಪ್ಪ, ದಿನೇಶ ನಿಂಗಣ್ಣನವರ, ನಗರಸಭೆ ಸದಸ್ಯ ಗಣೇಶ ಬಿಷ್ಟಣ್ಣನವರ ಮುಂತಾದವರು ಗಂಗಾಮತಸ್ಥ ಸಮಾಜದ ಅಭಿವೃದ್ಧಿಗಾಗಿ ಹೇರೂರ ನಡೆಸಿದ ಹೋರಾಟ ಸ್ಮರಿಸಿದರು.
ಓಲಿಂಪಿಯಾಡ್ಗೆ ಆಯ್ಕೆ
ಹಾನಗಲ್ಲ: ಮಾರನಬೀಡ ಮುದುಕಪ್ಪ ಕರಿಯಪ್ಪನವರ ಹಿಪ್ರಾ ಶಾಲೆ 6ನೇ ತರಗತಿ ವಿದ್ಯಾರ್ಥಿ ಚೇತನ ಚೆಂಗಳೆಮ್ಮನವರ ಹಾವೇರಿ ಜಿಲ್ಲಾಮಟ್ಟದ ಓಲಿಂಪಿಯಾಡ್ ಪರೀಕ್ಷೆ ಗಣಿತ ವಿಷಯದಲ್ಲಿ ತೇರ್ಗಡೆ ಹೊಂದಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

