ಜಿಪಂ ಮಾಜಿ ಉಪಾಧ್ಯಕ್ಷ ಜಿ.ಎಸ್. ಗಂಟೇರ ನಿಧನ
ಹಾನಗಲ್ಲ / ಹಾವೇರಿ: ಹಾವೇರಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದ ಗುಡ್ಡಪ್ಪ ಸಣ್ಣಸಿದ್ದಪ್ಪ ಗಂಟೇರ (62) ಅನಾರೋಗ್ಯದಿಂದ ಗುರುವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ತಾಲೂಕಿನ ಸಾಮಾಜಿಕ, ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಅವರು, ಹಾವೇರಿ ಜಿಪಂ ಉಪಾಧ್ಯಕ್ಷರಾಗಿ, ಹಾನಗಲ್ಲ ತಾಪಂ ಸದಸ್ಯರಾಗಿ, ಮಂಡಲ ಪಂಚಾಯಿತಿ ಪ್ರಧಾನರಾಗಿ ಹೆಸರು ಮಾಡಿದ್ದರು. 2004ರಲ್ಲಿ ಪಕ್ಷೇತರರಾಗಿ, 2008ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಹಾನಗಲ್ಲ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿದ್ದರು. ನಿಷ್ಠುರತೆ, ಪ್ರಾಮಾಣಿಕತೆಗೆ ಹೆಸರಾಗಿದ್ದ ಗುಡ್ಡಪ್ಪ ಗಂಟೇರ, ಕಾಂಗ್ರೆಸ್ನಲ್ಲಿ ಬಹುಕಾಲ ಗುರುತಿಸಿಕೊಂಡವರು. ಅವರಿಗೆ ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ.
ಸಂತಾಪ: ಶಾಸಕ ಮನೋಹರ ತಹಶೀಲ್ದಾರ, ಮಾಜಿ ಸಚಿವ ಸಿ.ಎಂ. ಉದಾಸಿ, ಸಂಸದ ಶಿವಕುಮಾರ ಉದಾಸಿ, ನೆಹರು ಯುವ ಕೇಂದ್ರದ ಮಹಾ ನಿರ್ದೇಶಕ ಸಲೀಂ ಅಹಮದ್, ಹಾವೇರಿ ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣವರ, ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರ, ಉಪಾಧ್ಯಕ್ಷೆ ಅನಿತಾ ಶಿವೂರ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಸತೀಶ ದೇಶಪಾಂಡೆ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಸ್. ರಾಮಲಿಂಗಣ್ಣನವರ, ಜಿಪಂ ಸದಸ್ಯರಾದ ಬಸವರಾಜ ಹಾದಿಮನಿ, ಮಹದೇವಪ್ಪ ಭಾಗಸರ, ಪದ್ಮನಾಭ ಕುಂದಾಪುರ, ಗೀತಾ ಅಂಕಸಖಾನಿ, ಮಾಜಿ ಸದಸ್ಯ ನಿಂಗಪ್ಪ ಪೂಜಾರ, ತಾಪಂ ಸದಸ್ಯರಾದ ವಿಜಯಾ ಹಿರೇಮಠ, ಮಧು ಪಾಣಿಗಟ್ಟಿ, ಆರ್.ಸಿ. ಹಿರೇಮಠ, ಮಲ್ಲನಗೌಡ ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆಡಿಪಿ ಸಭೆ ಮೊಟಕು
ಗುರುವಾರ ಬೆಳಗ್ಗೆ ಹಾನಗಲ್ಲ ತಾಪಂ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ಆರಂಭವಾದ ಹೊತ್ತಿಗೆ ಗುಡ್ಡಪ್ಪ ಗಂಟೇರ ಅವರ ನಿಧನದ ಸುದ್ದಿ ತಿಳಿಯಿತು. ತಕ್ಷಣ ಕೆಡಿಪಿ ಸಭೆಯನ್ನು ಮೊಟಕುಗೊಳಿಸಿ, ಗಂಟೇರ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಅಂತ್ಯಕ್ರಿಯೆ: ಮೃತರ ಅಂತ್ಯಕ್ರಿಯೆ ಡಿ. 6ರಂದು ಬೆಳಗ್ಗೆ 10 ಗಂಟೆಗೆ ಹಾನಗಲ್ಲ ತಾಲೂಕಿನ ಬ್ಯಾತನಾಳ ಗ್ರಾಮದಲ್ಲಿ ನಡೆಯುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

