ಹಾವೇರಿ

ಅಂಬೇಡ್ಕರ್ ಕಾರ್ಯ ಚರಿತ್ರಾರ್ಹ

Published On :

ಹಾವೇರಿ: ದಲಿತರ ಶೋಷಣೆ ಹಾಗೂ ದಬ್ಬಾಳಿಕೆ ವಿರುದ್ಧ ಜೀವನದುದ್ದಕ್ಕೂ ಹೋರಾಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಾ. ಅಂಬೇಡ್ಕರ್ ಚರಿತ್ರಾರ್ಹ ಕೆಲಸ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
ನಗರದ ಡಿ. ದೇವರಾಜ ಅರಸು ಭವನದಲ್ಲಿ ಸಮಾಜ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ವತಿಯಿಂದ ಜರುಗಿದ ಮಹಾ ಮಾನವತಾವಾದಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 57ನೇ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಅವರು, ಡಾ. ಅಂಬೇಡ್ಕರ್ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಸಾಹಿತ್ಯದ ಅಧ್ಯಯನ ಮಾಡಬೇಕು ಎಂದರು.
ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ. ಟಿ.ಎಂ. ಭಾಸ್ಕರ್ ಮಾತನಾಡಿ, ಶತಮಾನಗಳಿಂದ ತುಳಿತಕ್ಕೆ ಒಳಗಾದ ಜನರಿಗಾಗಿ ಅಂಬೇಡ್ಕರ್ ಕಲ್ಪಿಸಿದ ಮೀಸಲಾತಿ ಇಂದು ಫಲ ನೀಡುತ್ತಿದೆ. ಪರಿಶಿಷ್ಟ ಜಾತಿ-ವರ್ಗಗಳ ಯುವ ಪೀಳಿಗೆ ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು, ಉತ್ತಮ ಶಿಕ್ಷಣ ಪಡೆದು, ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆತು ಸೌಹಾರ್ದ ಬದುಕು ಸಾಗಿಸಲು ಮುಂದಾಗಬೇಕೆಂದು ಹೇಳಿದರು.
ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ ಮಾತನಾಡಿದರು. ಜಿಪಂ ಉಪ ಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶಿವಪುತ್ರಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ವೀರೇಶ್ವರಿ ಸುರಳಿಹಳ್ಳಿ ಉಪಸ್ಥಿತರಿದ್ದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಹೊರಪೇಟೆ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.