ಹಾವೇರಿ

ಅಂಬೇಡ್ಕರ್ ವೃತ್ತಕ್ಕೆ ಸೌಲಭ್ಯ: ಎಬಿವಿಪಿ ಮನವಿ

Published On :

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಡಿ. 6
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ೤ ಬಿ.ಆರ್. ಅಂಬೇಡ್ಕರ್ ಅವರ 57ನೇ ಪರಿನಿರ್ವಾಣ ದಿನವನ್ನು ಆಚರಿಸಿದರು.
ಅಭಾವಿಪ ತಾಲೂಕು ಸಂಚಾಲಕ ಮಲ್ಲಿಕಾರ್ಜುನ ಕಲ್ಯಾಣಿ ಮಾತನಾಡಿ, ಹಲವು ವರ್ಷಗಳಿಂದ ಪಟ್ಟಣದ ಅಂಬೇಡ್ಕರ್ ವೃತ್ತ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಇಲ್ಲಿ ಅಂಬೇಡ್ಕರ್ ವೃತ್ತವನ್ನು ನೆಪಕ್ಕಾಗಿ ಮಾಡಿದಂತಾಗಿದೆ. ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ, ಅವರಿಗೆ ಗೌರವ ಸೂಚಿಸಬೇಕು. 2014ರ ಏಪ್ರಿಲ್ ತಿಂಗಳಲ್ಲಿ ಬರುವ ಅಂಬೇಡ್ಕರ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಬೇಕು. ಅಷ್ಟರೊಳಗಾಗಿ ವೃತ್ತಕ್ಕೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು. ಈ ಕುರಿತ ಮನವಿಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಿವಲೀಲಾ ಎಸ್. ರಂಗಕ್ಕನವರ ಅವರಿಗೆ ಸಲ್ಲಿಸಿದರು.
ಪಪಂ ಉಪಾಧ್ಯಕ್ಷ ಮಹೇಂದ್ರ ಬಡಳ್ಳಿ, ಪಿಎಸ್‌ಐ ಜಿ.ಟಿ. ಶ್ರೀಶೈಲಮೂರ್ತಿ, ಎಬಿವಿಪಿ ಕಾರ್ಯಕರ್ತರಾದ ದೇವರಾಜ ಹಂಚಿನಮನಿ, ವಿಜಯ ಮುದಿಗೌಡ್ರ, ನವೀನ ಹಲವಾಗಲು, ವಿವೇಕ ಅರಳಿ, ಚೇತನ ಎಸ್.ಎಚ್., ಪವಿತ್ರಾ ಎನ್.ಕೆ., ಸುಧಾ ಸಂಕೊಳ್ಳಿ, ಶ್ವೇತಾ ಸಂಕೊಳ್ಳಿ, ಬಸನಗೌಡ ಮೂಲಿಮನಿ, ದೇವೇಂದ್ರ ನಾಯ್ಕ, ನಾಗಪ್ಪ ಜಾಲಿಮರದ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.