ದ. ಆಫ್ರಿಕಾದ ಗಾಂಧಿ ನೆಲ್ಸನ್ ಮಂಡೇಲಾಗೆ ಶ್ರದ್ಧಾಂಜಲಿ
ಹಾವೇರಿ: ವರ್ಣಭೇದ ನೀತಿಯ ವಿರುದ್ಧ ಹೋರಾಡಲು ಜೀವನವನ್ನೇ ಮುಡಿಪಾಗಿಟ್ಟಿದ್ದ ನೆಲ್ಸನ್ ಮಂಡೇಲಾ ಅವರ ನಿಧನದಿಂದ ಮಹಾನ್ ಮನುಕುಲ ವಾದಿಯನ್ನು ಜಗತ್ತು ಕಳೆದುಕೊಂಡಂತಾಗಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರ ಅಭಿಪ್ರಾಯ ವ್ಯಕ್ತಪಡಸಿದರು.
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಜರುಗಿದ ಸಭೆಯಲ್ಲಿ ನೆಲ್ಸನ್ ಮಂಡೇಲಾಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಮನುಷ್ಯರಲ್ಲಿ ಭೇದಭಾವ ಇರಬಾರದು, ಎಲ್ಲರಿಗೂ ಸಮಾನ ಅವಕಾಶವಿರಬೇಕು ಎಂಬ ಉದಾತ್ತ ಭಾವದಿಂದ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಂಡೇಲಾ 27 ವರ್ಷ ಕಾಲ ಜೈಲುವಾಸ ಅನುಭವಿಸಿದ್ದರು. ಶಿಕ್ಷಣವೇ ಸಮಾಜ ಸುಧಾರಣೆಯ ಅಸ್ತ್ರ ಎಂಬ ಸಂದೇಶವನ್ನು ಜಗತ್ತಿಗೇ ಸಾರಿದರು. ನಮ್ಮ ದೇಶದಲ್ಲಿ ಇಂದಿಗೂ ದಲಿತರನ್ನು ಮನೆಯೊಳಕ್ಕೆ ಬಿಟ್ಟುಕೊಳ್ಳದ ಪರಿಸ್ಥಿತಿ ಇದೆ. ಮೂಢನಂಬಿಕೆಗಳು ಜೀವಂತವಾಗಿವೆ. ಅವೆಲ್ಲವುಗಳ ವಿರುದ್ಧ ಹೋರಾಟಕ್ಕೆ ಮಂಡೇಲಾ ಆದರ್ಶ ಮಾದರಿಯಾಗಬೇಕೆಂದರು. ಉಪನ್ಯಾಸಕ ನಾಗರಾಜ ತಳವಾರ ಮಾತನಾಡಿ, ದಕ್ಷಿಣ ಆಫ್ರಿಕದ ಗಾಂಧಿ ಎನಿಸಿದ್ದ ನೆಲ್ಸನ್ ಮಂಡೇಲಾ ಸಮಾಜಕ್ಕೆ ಸಾರ್ವಕಾಲಿಕ ಮಾದರಿಯಾಗಿದ್ದಾರೆ. ನಮ್ಮ ಯುವ ಪೀಳಿಗೆಗೆ, ಅಸ್ಪೃಶ್ಯತೆ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದರು. ಎಸ್‌ಎಫ್‌ಐನ ರೇಣುಕಾ ಕಹಾರ ಮಾತನಾಡಿ, ಮಂಡೇಲಾ ಅವರ ಜೀವನಾದರ್ಶಗಳನ್ನು ವಿದ್ಯಾರ್ಥಿ ಸಮೂಹ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಸುಭಾಸ ಮಾದರ, ಚನ್ನಬಸಪ್ಪ ಹೂಗಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

