ಹಾವೇರಿ

ಆರೋಗ್ಯ ಪ್ರಶಿಕ್ಷಣ ಶಿಬಿರ

Published On :

ಹಾವೇರಿ: ಆಯುಷ್ ಇಲಾಖೆ, ಜಿಪಂ, ಜಿಲ್ಲಾ ಆಯುಷ್ ಕಚೇರಿ ಹಾಗೂ ಸಾವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಶಿರಸಿ ನಿಸರ್ಗ ಟ್ರಸ್ಟ್ ಸಹಯೋಗದಲ್ಲಿ ಶಿಕ್ಷಕರಿಗಾಗಿ ಯೋಗ ಆರೋಗ್ಯ ಪ್ರಶಿಕ್ಷಣ ಶಿಬಿರ ಡಿ. 9ರಂದು ಬೆಳಗ್ಗೆ 9ಕ್ಕೆ ಬ್ಯಾಡಗಿ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಉದ್ಘಾಟಿಸುವರು. ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸುವರು. ಸಂಸದ ಶಿವಕುಮಾರ ಉದಾಸಿ, ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಆಯುಷ್ ಇಲಾಖೆ ನಿರ್ದೇಶಕ ವಿಜಯಕುಮಾರ ಗೋಗಿ, ಡಿಸಿ ಪಾಂಡುರಂಗ ನಾಯಕ, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆಂಜನಪ್ಪ, ಡಿಡಿಪಿಐ ಎಸ್.ಬಿ. ಕೊಡ್ಲಿ, ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಜಿಪಂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ಬ್ಯಾಡಗಿ ತಾಪಂ ಅಧ್ಯಕ್ಷೆ ಚಿನ್ನವ್ವ ಪಾಸಿ, ಪುರಸಭೆ ಆಡಳಿತಾಧಿಕಾರಿ ಮಹ್ಮದ ಜುಬೇರ್, ಜಿಪಂ ಸದಸ್ಯೆ ಗದಿಗೆವ್ವ ಬಸನಗೌಡ್ರ, ಶಂಕ್ರಪ್ಪ ಮಾತನವರ, ವಿರೂಪಾಕ್ಷ ಬಳ್ಳಾರಿ, ಆಯುಷ್ ಇಲಾಖೆ ಜಂಟಿ ನಿರ್ದೇಶಕ ಡಾ.೤ ಹಸಿಬುನ್ನಿಸಾ, ಉಪನಿರ್ದೇಶಕಿ ಡಾ೤ ಸರಸ್ವತಿ, ಡಾ೤ ವಿ.ಪಿ. ಸತೀಶ ಹಾಗೂ ನಿಸರ್ಗ ಟ್ರಸ್ಟ್ ಅಧ್ಯಕ್ಷ ಡಾ. ವೆಂಕಟ್ರಮಣ ಹೆಗಡೆ ಭಾಗವಹಿಸುವರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಎಸ್.ಕಬಾಡೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.