ಹಾವೇರಿ

23ಕ್ಕೆ ಚನ್ನಮ್ಮ, ಬಸವೇಶ್ವರ ಪುತ್ಥಳಿ ಅನಾವರಣ

Published On :

ಹಾನಗಲ್ಲ: ಪಂಚಮಸಾಲಿ ಸಮುದಾಯದ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಸಿದ್ಧಲಿಂಗ ಮಹಾಸ್ವಾಮಿಗಳು ಹಾಗೂ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಮಹಾಸ್ವಾಮಿಗಳು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಹಾನಗಲ್ಲಿನಲ್ಲಿ ಡಿ. 23ರಂದು ನಡೆಯುವ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ಮಾಲತೇಶ ಸೊಪ್ಪೀನ ಹೇಳಿದರು.
ಪಟ್ಟಣದ ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಆಯೋಜಿಸಿದ ಪಂಚಮಸಾಲಿ ಸಮಾಜದ ಸಂಘಟನಾ ಸಭೆಯಲ್ಲಿ ಮಾತನಾಡಿ, ಹಾನಗಲ್ಲಿನ ವಿರಕ್ತಮಠದ ಆವರಣದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಲಾಗುತ್ತಿದೆ. ವೀರಶೈವ ಸಮುದಾಯ ಹಾಗೂ ನಾಡಿನ ಹಿತಕ್ಕಾಗಿ ಬದುಕನ್ನೇ ಸವೆಸಿದ ಮಹಾತ್ಮರು ಎಂದರು.
ತಾಲೂಕು ಮಾಜಿ ಅಧ್ಯಕ್ಷ ಚಂದ್ರಣ್ಣ ಕಳ್ಳಿ, ಪಂಚಮಸಾಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಸ್. ಪಡೆಪ್ಪನವರ ಮಾತನಾಡಿದರು. ಸಭೆಯಲ್ಲಿ ಹಾವೇರಿ ಜಿಲ್ಲಾ ಪಂಚಮಸಾಲಿ ನೌಕರರ ಘಟಕದ ಗೌರವಾಧ್ಯಕ್ಷ ಮಾರುತಿ ಶಿಡ್ಲಾಪುರ, ತಾಲೂಕು ಘಟಕದ ಕಾರ್ಯದರ್ಶಿ ನಿಜಲಿಂಗಪ್ಪ ಮುದೆಪ್ಪನವರ, ಮುಖಂಡರಾದ ಬಸವಣ್ಣೆಪ್ಪ ಬೆಂಚಳ್ಳಿ, ರಾಜಣ್ಣ ಬೆಟಗೇರಿ, ನ್ಯಾಯವಾದಿ ಸಿ.ಎಸ್. ದೇವಗಿರಿ, ಯಲ್ಲಪ್ಪ ನಾಗಪ್ಪನವರ, ಬಾಬಣ್ಣ ಪಟ್ಟಣಶೆಟ್ಟಿ, ಶಿವಪುತ್ರಗೌಡ ಪಾಟೀಲ, ಮಲ್ಲಿಕಾರ್ಜುನ ಸಾಲಿ, ಬಿ.ಜಿ. ಮಲ್ಲಮ್ಮನವರ, ಸಿ.ಜಿ.  ಸಣ್ಣಪ್ಪನವರ, ಎಲ್.ಎಸ್. ಶಿವಣ್ಣನವರ, ನಾಗನಗೌಡ ಪಾಟೀಲ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.