ಅಕ್ಕಿ ಸಂಗ್ರಹಿಸಿಡಲು ಪರ್ಯಾಯ ವ್ಯವಸ್ಥೆ
ಹಾವೇರಿ: ಆಹಾರ ಇಲಾಖೆಯಡಿ ಜಾರಿಗೆ ಬಂದಿರುವ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಸಂಗ್ರಹಿಸಿಡಲು ಸವಣೂರು ಮತ್ತು ಶಿಗ್ಗಾಂವಿಯಲ್ಲಿ ಮಾತ್ರ ಉಗ್ರಾಣದ ಕೊರತೆಯಾಗಿದ್ದು, ಅಧಿಕಾರಿಗಳ ಸೂಚನೆ ಮೇರೆಗೆ ಬೇರೆ ಇಲಾಖೆಗಳನ್ನ್ನು ಸಂಪರ್ಕಿಸಿ ಉಗ್ರಾಣಗಳು ಖಾಲಿ ಇದ್ದಲ್ಲಿ ಅಕ್ಕಿಯನ್ನು ಅಲ್ಲಿಯೂ ಸಂಗ್ರಹಿಸಿಡಲು ಆಹಾರ ಮತ್ತು ನಾಗರಿಕ ಇಲಾಖೆ ಸರಬರಾಜು ಇಲಾಖೆ ಉಪನಿರ್ದೇಶಕರಿಗೆ ರಾಜ್ಯ ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಬಿ. ದ್ಯಾಬೇರಿ ಅವರು ಸೂಚಿಸಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜರುಗಿದ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೌಷ್ಟಿಕ ಆಹಾರ ಒದಗಿಸಿ: ಜಿಲ್ಲೆಯಲ್ಲಿ ಕ್ಷೀರಭಾಗ್ಯ ಯೋಜನೆಯಡಿ ಒಟ್ಟು 1914 ಅಂಗನವಾಡಿ ಕೇಂದ್ರಗಳ ಮುಖಾಂತರ ಒಟ್ಟು 71,816 ಮಕ್ಕಳಿಗೆ ವಾರದಲ್ಲಿ ಮೂರು ದಿನ ಹಾಲು ವಿತರಣೆ ಮಾಡಲಾಗುತ್ತಿದೆ. ಪೂರಕ ಪೌಷ್ಟಿಕ ಆಹಾರ ವಿತರಣೆ ಯೋಜನೆಯಡಿ ಗುಣಮಟ್ಟದ ಆಹಾರ ಪೂರೈಕ್ನೆ ಮಾಡಬೇಕೆಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯದರ್ಶಿಗಳು ಸೂಚಿಸಿದರು.
ಅಳವಡಿಸಿಕೊಳ್ಳಲು ಸೂಚನೆ: ತೋಟಗಾರಿಕೆ ಇಲಾಖೆ ಯೋಜನೆಯಡಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಶೇ. 100ರ ಪ್ರಗತಿ ಸಾಧಿಸಬೇಕೆಂದರಲ್ಲದೆ, ಜಿಲ್ಲೆಯಲ್ಲಿ ಸಂಜೀವಿನಿ ಯೋಜನೆ ಜಾರಿಯಾಗಿದ್ದು, ಎಲ್ಲ ಇಲಾಖೆಗಳ ಸ್ವ-ಸಹಾಯ ಸಂಘಗಳ ವಿವರಗಳನ್ನ್ನು ನಿಗಧಿಪಡಿಸಿದ ನಮೂನೆಯಲ್ಲಿ ಕ್ರೋಡೀಕರಿಸಿ ಗ್ರಾಮ ಪಂಚಾಯತ್‌ನ ಪಂಚತಂತ್ರಾಂಶದಲ್ಲಿ ಅಳವಡಿಸಿಕೊಳ್ಳಲು ಈಗಾಗಲೇ ಸೂಚಿಸಲಾಗಿದೆ ಎಂದರು. ಜಿಲ್ಲಾ ಆರೋಗ್ಯ ಇಲಾಖೆಯಿಂದ ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ಸಾಧಿಸಿದ್ದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮಕೈಗೊಂಡು ಲಾರ್ವಾ ನಾಶಕ್ಕಾಗಿ ಸಮೀಕ್ಷೆ ಕಾರ್ಯ ಮತ್ತು ಮೀನು ಮರಿಗಳನ್ನ್ನು ಬಿಡಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯದರ್ಶಿಗಳು ಸೂಚಿಸಿದರು.
ಸಕಾಲಕ್ಕೆ ಮಾಹಿತಿ ದಾಖಲಿಸಿ: ಸಕಾಲ ಯೋಜನೆಯಡಿ ಕೆಲವೊಂದು ಇಲಾಖೆಗಳು ಸರಿಯಾಗಿ ದಾಖಲಿಸದೇ ಇರುವುದರಿಂದ ಜಿಲ್ಲೆಯ ಪ್ರಗತಿ ಸಾಧಿಸುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಕಾಲಕ್ಕೆ ಮಾಹಿತ್ನಿ ದಾಖಲಿಸಬೇಕೆಂದು ತಿಳಿಸಿದರು.
ಕಾನೂನು ನೆರವು ಒದಗಿಸಿ: ಹಾವೇರಿ ನಗರದ ರಸ್ತೆ ಮತ್ತು ಒಳಚರಂಡಿಗಳನ್ನ್ನು ಶೀಘ್ರ ಸ್ವಚ್ಛಗೊಳಿಸಲು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರಲ್ಲದೇ, ಜಿಲ್ಲೆಯಲ್ಲಿ ಮಹಿಳಾ ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಈ ಮಹಿಳಾ ಸಹಾಯವಾಣಿ ಕೇಂದ್ರಗಳಲ್ಲಿ ಸಮಾಲೋಚನೆ ಮೂಲಕ ಪರಿಹಾರ ಕೊಡಿಸಿ ಅಗತ್ಯವಿದ್ದಲ್ಲಿ ಕಾನೂನು ನೆರವು ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಆಂಜನಪ್ಪ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 2013-14ರ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಇದೂವರೆಗೂ 95,760 ಟನ್ ರಸಗೊಬ್ಬರ ಪೂರೈಕೆಯಾಗಿದ್ದು, ಇದರಲ್ಲಿ 70,861 ಟನ್ ವಿತರಣೆಯಾಗಿದೆ. 24,899 ಟನ್ ಉಳಿಕೆ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲವೆಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ 9 ಲಕ್ಷ ಜಾನುವಾರುಗಳಲ್ಲಿ 30,1379 ಜಾನುವಾರುಗಳಿಗೆ ಚಿಕಿತ್ಸೆ ಹಾಗೂ 4,60,110 ಜಂತು ನಾಶಕ ಔಷಧ ನೀಡಲಾಗಿದೆ ಎಂದು ತಿಳಿಸಿದರು.
ಎಲ್ಲ ಇಲಾಖಾಧಿಕಾರಿಗಳು ಇಲಾಖೆಗೆ ನಿಗದಿಪಡಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನ್ನು ಈ ವರ್ಷದ ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕೆಂದು ಡಿಸಿ ಸೂಚಿಸಿದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಜಗಮಯ್ಯ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಿವಪುತ್ರಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

