ಹಾವೇರಿ

ಹಕ್ಕು, ಕರ್ತವ್ಯ ಅರಿಯಿರಿ: ನ್ಯಾ. ಸಾವಿತ್ರಿ

Published On :

ಹಾವೇರಿ: ಎಲ್ಲರೂ ತಮ್ಮ ಹಕ್ಕು, ಕರ್ತವ್ಯಗಳ ಬಗ್ಗೆ ಅರಿವು ಹೊಂದಿ, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಾವಿತ್ರಿ ವಿನಾಯಕ ಹೇಳಿದರು.
ನಗರದ ಗುರುಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಜರುಗಿದ 'ಮಾನವ ಹಕ್ಕುಗಳ ದಿನಾಚರಣೆ'  ಕಾರ್ಯಕ್ರಮ ಉದ್ಘಾಟಿಸಿ, ಬದುಕುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಯಾರೂ ಕಸಿದುಕೊಳ್ಳುವಂತಿಲ್ಲ. ಸಾಮಾಜಿಕ ಭದ್ರತೆ ಹಕ್ಕು, ನೀರು, ಆಹಾರ, ಮನೆ, ಆರೋಗ್ಯ, ಶೈಕ್ಷಣಿಕ ಹಕ್ಕುಗಳು ಎಲ್ಲ ಮನುಷ್ಯರಿಗಿವೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ ಮಾನವ  ಹಕ್ಕುಗಳ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಮಾತನಾಡಿದರು.
ಜಿಪಂ ಸಿಇಒ ಕೆ.ಬಿ. ಅಂಜನಪ್ಪ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎನ್.ಎಸ್. ಹಿರೇತನದ ಇದ್ದರು. ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎನ್.ಎಸ್. ಪಾಟೀಲ ಸ್ವಾಗತಿಸಿದರು. ಅನ್ನಪೂರ್ಣಾ ವಂದಿಸಿದರು. ನಾಗರಾಜ ನಡುವಿನಮಠ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.