ಅಬಲೂರು: 28ರಂದು 3ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಿರೇಕೆರೂರು: ತಾಲೂಕಿನ ಸರ್ವಜ್ಞ ಕವಿಯ ಕರ್ಮಭೂಮಿಯಾದ ಅಬಲೂರಿನಲ್ಲಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 28ರಂದು ಅದ್ದೂರಿಯಾಗಿ ಜರುಗಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಪಿ. ಗೌಡರ ತಿಳಿಸಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಜರುಗಿದ ಕಸಾಪ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಬಲೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ಆಚರಿಸಲಾಗುವುದು. ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ತಾಲೂಕಿನ ಕವಿಗಳು ಕಸಾಪ ಕಾರ್ಯದರ್ಶಿ ರಾಘವೇಂದ್ರ ಹಂಚಿನಮನಿ, ಅಶೋಕ ಗೊಲ್ಲರ ಅವರಲ್ಲಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9901130412 ಸಂಪರ್ಕಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸ್ಪೀಕರ್ ಬಿ.ಜಿ. ಬಣಕಾರ, ಡಾ ಭೋಜರಾಜ ಪಾಟೀಲ, ಕೋಶಾಧ್ಯಕ್ಷ ಮಹೇಂದ್ರ ಬಡಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಅಶೋಕ ಹಳ್ಳಿಯವರ, ಬಸವರಾಜ ಪೂಜಾರ, ಎಲ್.ವಿ. ಕಲವೀರಪ್ಪನವರ, ಕೆ.ಎಚ್. ಕಾಟೇನಹಳ್ಳಿ, ಪ್ರಭು ಮಳವಳ್ಳಿ ಇದ್ದರು. ಕಸಾಪ ಮಾಜಿ ಅಧ್ಯಕ್ಷ ಎನ್. ಬಸವಾರಾಧ್ಯ, ದಕ್ಷಿಣ ಆಪ್ರಿಕಾದ ನೆಲ್ಸನ್ ಮಂಡೇಲಾಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

