ಇಂದಿನಿಂದ ಪ್ರತಿಭಾ ಕಾರಂಜಿ
ಹಾನಗಲ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ (ಸಾಂಸ್ಕೃತಿಕ ಮತ್ತು ಶೈಕ್ಷಣಿಕ) ಪಟ್ಟಣದ ಶಾಸಕರ ಮಾದರಿ ಕೇಂದ್ರ ಶಾಲೆ ಆವರಣದಲ್ಲಿ ಡಿ. 13 ಹಾಗೂ 14ರಂದು ನಡೆಯಲಿದೆ. ಶುಕ್ರವಾರ ಪ್ರಾಥಮಿಕ ಶಾಲಾ ವಿಭಾಗದ ವೈಯುಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆ, ಡಿ. 14ರಂದು ಪ್ರೌಢಶಾಲಾ ವಿಭಾಗದ ವೈಯುಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶಾಸಕ ಮನೋಹರ ತಹಶೀಲ್ದಾರ ಉದ್ಘಾಟಿಸುವರು. ತಾಪಂ ಅಧ್ಯಕ್ಷ ಮಲ್ಲನಗೌಡ್ರು ವೀರನಗೌಡ್ರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಹರಿಜನ, ಜಿಪಂ ಸದಸ್ಯ ಪದ್ಮನಾಭ ಕುಂದಾಪುರ, ಬಸವರಾಜ ಹಾದಿಮನಿ, ಮಹಾದೇವಪ್ಪ ಬಾಗಸರ, ಗೀತಾ ಅಂಕಸಖಾನಿ, ಕಸ್ತೂರೆವ್ವ ವಡ್ಡರ, ಅಬಿದಾಬಿ ನದಾಫ, ತಾಪಂ ಉಪಾಧ್ಯಕ್ಷೆ ಅನಿತಾ ಶಿವೂರ, ಪುರಸಭೆ ಉಪಾಧ್ಯಕ್ಷ ಮಹಮ್ಮದ ಜಾಫರ ಕೇಣಿ, ಡಿಡಿಪಿಐ ಎಸ್.ಬಿ. ಕೊಡ್ಲಿ, ಡಯಟ್ ಪ್ರಾಚಾರ್ಯ ಎಂ.ಡಿ. ಬಳ್ಳಾರಿ, ತಹಸೀಲ್ದಾರ್ ಡಾ ನಾಗೇಂದ್ರ ಹೊನ್ನಳ್ಳಿ, ತಾಪಂ ಇಒ ಡಾ ಡಿ.ಸಿ. ಬಸವರಾಜಪ್ಪ, ಮಾದರಿ ಶಾಲೆ ಅಧ್ಯಕ್ಷ ಜಯಪ್ಪ ದೇವಗಿರಿ ಭಾಗವಹಿಸುವರು. ಈ ಸ್ಪರ್ಧೆಗೆ ಕ್ಲಸ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಮಕ್ಕಳನ್ನು ಆಯಾ ದಿನಾಂಕಗಳಂದು ಬೆಳಗ್ಗೆ 9.30ಕ್ಕೆ ಕರೆದುಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಬಿಇಒ ಪ್ರಭು ಸುಣಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರ ಪ್ರಶಸ್ತಿಗೆ ಅರ್ಜಿ
ಹಾವೇರಿ: ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ ಐದು ವರ್ಷಗಳಿಂದ ವಿಶೇಷ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗಾಗಿ ಸ್ತ್ರೀ ಶಕ್ತಿ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು (ಮಾ. 8) ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ರು. 3 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ದೇವಿ ಅಹಿಲ್ಯಾಬಾಯಿ ಹೋಲ್ಕರ, ಕನ್ನಗಿ, ಮಾತಾ ಜೀಜಾಬಾಯಿ, ರಾಣಿ ಗೈಡಿನ್ಲೂ ಝೋಲಿಯುಂಗ್, ರಾಣಿ ಲಕ್ಷ್ಮಿಬಾಯಿ ಹಾಗೂ ರಾಣಿ ರುದ್ರಮ್ಮದೇವಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಡಿ. 18ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಹಾವೇರಿ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

