ಹಾವೇರಿ

ನಿತ್ಯ 10 ತಾಸು ತ್ರೀಫೇಸ್ ವಿದ್ಯುತ್ ಕೊಡಿ: ಆಗ್ರಹ

Published On :

ಹಾನಗಲ್ಲ: ತಾಲೂಕಿನ ರೈತರು ಸಾಕಷ್ಟು ಹಣ ವ್ಯಯಿಸಿ, ತೋಟಗಾರಿಕೆ ಬೆಳೆ ಬೆಳೆಯುತ್ತಿದ್ದು, ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ನಿತ್ಯ ಕನಿಷ್ಠ 10 ತಾಸು ವಿದ್ಯುತ್ ಒದಗಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಒತ್ತಾಯಿಸಿದರು.
ಅಕ್ಕಿಆಲೂರು ಹೆಸ್ಕಾಂ ಶಾಖಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಕನಿಷ್ಠ 10 ತಾಸು ತ್ರೀಫೇಸ್ ವಿದ್ಯುತ್ ಪೂರೈಸಬೇಕೆಂಬುದು ರೈತರ ಆಗ್ರಹ. ಈ ಬಗ್ಗೆ ಹಲವು ಬಾರಿ ಒತ್ತಾಯಿಸಿದ್ದರೂ ಪ್ರಯೋಜನವಾಗಿಲ್ಲ. ಇನ್ನು 15 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಹೆಸ್ಕಾಂ ಶಾಖಾಧಿಕಾರಿ ಕಚೇರಿಗೆ ರೈತರೊಂದಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.
ಗ್ರಾಮದಲ್ಲಿ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಲೈನ್‌ಗಳು ತಗ್ಗಿನಲ್ಲಿವೆ. ಅವುಗಳನ್ನು ಸುರಕ್ಷಿತ ಅಂತರಕ್ಕೆ ಎತ್ತರಿಸುವಂತೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಲೈನ್‌ಮನ್ ಹಾಗೂ ಸಿಬ್ಬಂದಿ ಕೊರತೆಯೂ ಸಮರ್ಪಕ ಸೇವೆಗೆ ಅಡ್ಡಿಯಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸುವಂತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದರು.
ಹೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತ ಕೃಷ್ಣಪ್ಪ ಪ್ರತಿಕ್ರಿಯಿಸಿ, ಹಳೆಯ ಕಂಬ ಹಾಗೂ ಲೈನ್ ಬದಲಿಸುವ ಕೆಲಸವನ್ನು ಇನ್ನೊಂದು ತಿಂಗಳಲ್ಲಿ ಆರಂಭಿಸಲಾಗುವುದು. ಸಮರ್ಪಕ ಪ್ರಮಾಣದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಒತ್ತು ನೀಡಲಾಗುವುದು. ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು, 10 ತಾಸು ತ್ರೀಫೇಸ್ ವಿದ್ಯುತ್ ಬೇಡಿಕೆ ಕುರಿತು ವಿವರಿಸುವುದಾಗಿ ತಿಳಿಸಿದರು. ಶಿಥಿಲವಾಗಿರುವ 10 ಕಂಬಗಳನ್ನು ತಕ್ಷಣವೇ ಬದಲಾಯಿಸಲು ಕ್ರಮ ಕೈಗೊಳ್ಳುವಂತೆ ಶಾಖಾಧಿಕಾರಿ ರಿಯಾಜ್ ಅಹ್ಮದ್ ಖುದಾವಂದೆ ಅವರಿಗೆ ಸೂಚನೆ ನೀಡಿದರು.
ಪ್ರಮುಖರಾದ ಸಿದ್ದನಗೌಡ ಪಾಟೀಲ, ರಾಜಶೇಖರ ಪಾಟೀಲ, ರಫೀಕಸಾಬ ಹಿತ್ತಲಮನಿ, ಶಿವಕುಮಾರ ಪಾಟೀಲ, ಜಗದೀಶ ಪರೆಗೊಂಡರ, ಚಂದ್ರು ಸಾಲಿಮಠ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.