ಹಾವೇರಿ

ಸುದ್ದಿ ಸಂಕ್ಷೇಪ

Published On :

18ರಂದು ಗ್ರಾಮ ಸಭೆ
ಹಾವೇರಿ: ತಾಲೂಕಿನ ಕುಳೇನೂರ ಗ್ರಾಪಂನ ಗ್ರಾಮಸಭೆ ಡಿ. 18ರಂದು ಬೆಳಗ್ಗೆ 10.30ಕ್ಕೆ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಜರುಗಲಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಇಂದು ಪ್ರತಿಭಾ ಕಾರಂಜಿ
ಬ್ಯಾಡಗಿ: ಇಲ್ಲಿನ ಡಾ೤ ಬಿ.ಆರ್. ಅಂಬೇಡ್ಕರ್ ಪ್ರಾಥಮಿಕ ಶಾಲೆ ಹಾಗೂ ಎಸ್‌ಎಸ್‌ಪಿಎನ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಡಿ. 14ರಂದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಲಿವೆ. ಸ್ಥಳೀಯ ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸಲಿದ್ದಾರೆ. ತಾಪಂ ಅಧ್ಯಕ್ಷೆ ಚಿನ್ನಮ್ಮ ಫಾಸಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯರಾದ ಶಂಕ್ರಣ್ಣ ಮಾತನವರ, ಗದಿಗೆಮ್ಮ ಬಸನಗೌಡ್ರ, ವಿರೂಪಾಕ್ಷಪ್ಪ ಬಳ್ಳಾರಿ, ತಾಪಂ ಉಪಾಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಪಟ್ಟಣಶೆಟ್ಟಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸುರೇಶ ಯತ್ನಳ್ಳಿ, ಎಪಿಎಂಸಿ ಸದಸ್ಯ ಶಿವಪ್ಪ ಅಳಲಗೇರಿ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂದ್ರಣ್ಣ ಶೆಟ್ಟರ ಉಪಸ್ಥಿತರಿರುವರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಕೀಲರ ಕ್ರೀಡಾಕೂಟ
ಬ್ಯಾಡಗಿ: ನ್ಯಾಯವಾದಿಗಳ ದಿನಾಚರಣೆ ಅಂಗವಾಗಿ ವಕೀಲರ ಸಂಘದ ಆಶ್ರಯದಲ್ಲಿ ಸ್ಥಳೀಯ ತಾಲೂಕು ಕ್ರೀಡಾಂಗಣದಲ್ಲಿ ಡಿ. 14 ಹಾಗೂ 15ರಂದು ಜಿಲ್ಲಾ ಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. ಡಿ. 14ರಂದು ಬೆಳಗ್ಗೆ 8.30ಕ್ಕೆ ಸಂಚಾರಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಎಸ್.ಎಸ್. ಕುಜ್ಜಿ ಕ್ರೀಡಾಕೂಟ ಉದ್ಘಾಟಿಸಲಿದ್ದು, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಫ್.ಎಂ. ಮುಳಗುಂದ ಅಧ್ಯಕ್ಷತೆ ವಹಿಸಲಿದ್ದಾರೆ. ಕಿರಿಯ ದಿವಾಣಿ ನ್ಯಾಯಾಧೀಶ ಬಿ.ಜಿ. ಪ್ರಮೋದ, ನ್ಯಾಯವಾದಿಗಳಾದ ಜಿ.ಎಂ. ಅಂಗಡಿ, ಪಿ.ಆರ್. ಮಠದ, ವಿ.ಎಸ್. ಕಡಗಿ, ಬಿ.ಎಸ್. ಚೂರಿ, ಆರ್.ವಿ. ಬೆಳಕೇರಿಮಠ, ಜಿ.ಟಿ. ವೀರೇಶ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಸಾಕ್ಷರತಾ ಸ್ವಯಂಸೇವಕರ ಪುನಶ್ಚೇತನ ತರಬೇತಿ
ಹಾವೇರಿ: ಸ್ವಯಂ ಸೇವಕರ (ಸಾಕ್ಷರತಾ) 2ನೇ ಹಂತದ ತರಬೇತಿ ಕಾರ್ಯಕ್ರಮ ತಾಲೂಕಿನ ಕನವಳ್ಳಿ ಗ್ರಾಮದ ಸರ್ಕಾರಿ ಕನ್ನಡ ಪ್ರೌಢಶಾಲೆಯಲ್ಲಿ ಈಚೆಗೆ ಜರುಗಿತು. ಕನವಳ್ಳಿ ಗ್ರಾಪಂ ಉಪಾಧ್ಯಕ್ಷೆ ಶಿದ್ದಮ್ಮ ಮೈಲಣ್ಣನವರ ಉದ್ಘಾಟಿಸಿದರು. ಜಿಲ್ಲಾ ಕಾರ್ಯಕ್ರಮ ಸಹಾಯಕ ಚಂದ್ರಕಾಂತ ಕುಸನೂರ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಶಿಕ್ಷಕ ಬಿ.ಎಸ್. ನವಲೆ, ಗ್ರಾಪಂ ಸದಸ್ಯೆ ಸರೋಜಾಬಾಯಿ ಸಿಂಪಿಗೇರ, ತಾಪಂ ಸದಸ್ಯ ಬಿ.ಎಂ. ಅಗಡಿ, ವಸತಿ ನಿಲಯ ಮೇಲ್ವಿಚಾರಕ ಜಿ.ಎಫ್. ದೊಡ್ಡಮನಿ, ವೈ.ಜಿ. ರಿತ್ತಿ ಇದ್ದರು. ಸಂಪನ್ಮೂಲ ಶಿಕ್ಷಕ ಕೃಷ್ಣಾ ಪಾಟೀಲ ಸ್ವಾಗತಿಸಿದರು. ಶಿಕ್ಷಕಿ ಎಂ.ಆರ್. ಶಿವಪುರ ನಿರೂಪಿಸಿದರು. ಕಲಾವಿದರಾದ ಪುಟ್ಟಣ್ಣ ಹಾಗೂ ಸಂಗಡಿಗರು ಸಾಕ್ಷರ ಗೀತೆ ಹಾಡಿದರು. ಮಂಜುನಾಥ ಪಿಶೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.