ಹಾವೇರಿ

ಹಾವೇರಿ ರೈತರ ಸಾಲ ಮನ್ನಾ ಹಣ ಬಿಡುಗಡೆ

Published On :

ಹಾವೇರಿ: ರಾಜ್ಯ ಸರ್ಕಾರ ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಮೂಲಕ ಆಗಸ್ಟ್ 2012ರಿಂದ ಜುಲೈ 2013ರ ಅವಧಿಯಲ್ಲಿ ಪಡೆದ 53,422 ರೈತರ ಅಲ್ಪಾವಧಿ ಬೆಳೆಸಾಲವನ್ನು ಮನ್ನಾ ಮಾಡಿತ್ತು. ಮೂರು ಜಿಲ್ಲೆಯಿಂದ ರು. 116.20 ಕೋಟಿ ಅಸಲು ಮತ್ತು ರು. 11.76 ಕೋಟಿ ಬಡ್ಡಿ ಸೇರಿ ಒಟ್ಟು ರು. 127.96 ಕೋಟಿ ಸಾಲ ಮನ್ನಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ 20,398 ರೈತರ ರು. 41.52 ಕೋಟಿ ಅಸಲು ಹಾಗೂ ರು. 4.23 ಕೋಟಿ ಬಡ್ಡಿ ಮನ್ನಾ ಆಗಿದೆ. ಧಾರವಾಡ ಜಿಲ್ಲೆಯ ರು. 41.55 ಕೋಟಿ ಅಸಲು, ರು. 4.08 ಕೋಟಿ ಬಡ್ಡಿ, ಗದಗ ಜಿಲ್ಲೆಯ ರು. 33.12 ಕೋಟಿ ಅಸಲು, ರು. 3.44 ಕೋಟಿ ಬಡ್ಡಿ ಮನ್ನಾ ಮಾಡಲಾಗಿದೆ. ಸರ್ಕಾರ 18787 ರೈತರಿಗೆ ರು. 53.40 ಕೋಟಿ ಸಾಲ ಮನ್ನಾದ ಹಣ ಬಿಡುಗಡೆ ಮಾಡಿದೆ. ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಗೆ ರು. 3.33 ಕೋಟಿ ಬಡ್ಡಿ ಹಣ ಬಿಡುಗಡೆಯಾಗಿದೆ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.