ಹಾವೇರಿ

ಪ್ರತಿಭಾ ಕಾರಂಜಿ ಮಕ್ಕಳ ಹಬ್ಬವಾಗಲಿ

Published On :

ಹಿರೇಕೆರೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಕಾರಂಜಿಯಂತೆ ಅನಾವರಣ ಮಾಡುವಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪ್ರತಿಭಾಕಾರಂಜಿ ವೇದಿಕೆ ಉತ್ತಮವೇದಿಕೆಯಾಗಿದ್ದು, ಇದನ್ನು ತಾಲೂಕು ಮಟ್ಟದಲ್ಲಿ ಮಕ್ಕಳ ಹಬ್ಬವಾಗಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಬೇಕು. ಅದಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಯು.ಬಿ. ಬಣಕಾರ ಕರೆ ನೀಡಿದರು.
ತಾಲೂಕಿನ ಚಿಕ್ಕೇರೂರು ಯಲ್ಲಾಪುರ ಗ್ರಾಮದ ಮಹತ್ಮಾ ಗಾಂಧಿ ಪ್ರೌಢಶಾಲೆಯ ಅವರಣದಲ್ಲಿ ಜರುಗಿದ 2013-14ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಳೆಯ ಮಕ್ಕಳಲ್ಲಿ ಅಪಾರ ಜ್ಞಾನ ಸಂಪತ್ತು ಇದೆ. ಮಕ್ಕಳಿಗೆ ದಿನನಿತ್ಯ ಪಠ್ಯ ಪುಸ್ತಕದ ಜ್ಞಾನದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಮತ್ತಷ್ಟು ಭೌದ್ಧಿಕ ವಿಕಾಸಕ್ಕೆ ಅನುಕೂಲವಾಗಿರುವ ಇಂಥ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸುವ ಮೂಲಕ ಪ್ರೋತ್ಸಾಹಿಸಬೇಕು. ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಮಕ್ಕಳ ಹಬ್ಬವನ್ನಾಗಿ ಪುನಃ ಮಾಡುವಂತೆ ಸೂಚಿಸಿ, ಅದಕ್ಕೆ ಅಗತ್ಯವಾಗಿರುವ ಸಕಲ, ಅಗತ್ಯಗಳನ್ನು ಪೂರೈಸಲು ಸದಾಸಿದ್ದ ಎಂದರು.
ಡಿ. 28ರಂದು ಸರ್ವಜ್ಞನ ಕವಿ ಹುಟ್ಟೂರಾದ ಅಬಲೂರು ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ತೃತೀಯ ಸಮ್ಮೇಳನ ಆಯೋಜಿಸಲಾಗಿದ್ದು, ಎಲ್ಲರೂ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಶಿಕ್ಷಕರಲ್ಲಿ ಮನವಿ ಮಾಡಿದರು.
ಮಹಾತ್ಮ ಗಾಂಧಿ ವಿದ್ಯಾಸಂಸ್ಥೆ ಅಧ್ಯಕ್ಷ ಮಂಜುನಾಥ ವೇರ್ಣೇಕರ, ಜಿಪಂ ಸದಸ್ಯರಾದ ಪಾರ್ವತಮ್ಮ ಬೋಗಾವಿ, ಬಸಮ್ಮ ಅಬಲೂರು, ತಾಪಂ ಅಧ್ಯಕ್ಷೆ ರೇಣುಕಾ ಚಲುವಾದಿ, ಸದಸ್ಯರಾದ ಚಂದ್ರು ಅಣ್ಣಪ್ಪನವರ, ಸುನಿತಾ ಕೊಡ್ಲೇರ, ಜಿಪಂ ಮಾಜಿ ಸದಸ್ಯ ಶಿವರಾಜ ಹರಿಜನ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಬಿದರಿ, ಕಾರ್ಯದರ್ಶಿ ಸಿ.ಎಸ್. ಹಾರ್ನಳ್ಳಿ, ಕರವೇ ಜಿಲ್ಲಾಧ್ಯಕ್ಷ ಕರಬಸಯ್ಯ ಬಸರಿಹಳ್ಳಿಮಠ. ತಾಲೂಕಾಧ್ಯಕ್ಷ ಗಿರೀಶ ಬಾರ್ಕಿ, ಗ್ರಾಪಂ ಅಧ್ಯಕ್ಷ ಸವಿತಾ ಬಣಕಾರ, ಉಪಾಧ್ಯಕ್ಷೆ ಕೈರುನಬಿ ಬಳ್ಳಾರಿ, ಬಸವರಾಜ ಮಂಗಣಿ, ರಾಮಪ್ಪ ಹುಬ್ಬಳ್ಳಿ, ಲೀಲಾವತಿ ವಂಟಕರ, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ್, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪಿ.ಬಿ. ನಿಂಗನಗೌಡ್ರ, ಸಂಯೋಜಕ ವಿ.ಎಚ್. ಕೋರಿ, ಎಂ.ಡಿ. ಕುರುಬರ, ಮುಖ್ಯೋಪಾಧ್ಯಾಯ ಪಿ.ಎನ್. ಮೇಗಳಮನಿ ಹಾಗೂ ತಾಲೂಕಿನ ವಿವಿಧ ಶಾಲೆಗಳ ಸ್ಪರ್ಧಾಳುಗಳು, ಶಿಕ್ಷಕರು ಹಾಗೂ ಪಾಲಕರು ಪಾಲ್ಗೊಂಡಿದ್ದರು. ತಾಲೂಕಿನ ಡಮ್ಮಳ್ಳಿ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ನೃತ್ಯ ಜನಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.