ಹಾವೇರಿ

ಲೋಕಪಾಲ ಮಸೂದೆ ಜಾರಿಮಾಡಿ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಡಿ. 16
ಜನ ಲೋಕಪಾಲ್ ಮಸೂದೆ ಜಾರಿಗೆ ತರುವಂತೆ ಒತ್ತಾಯಿಸಿ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟ ಬೆಂಬಲಿಸಿ ತಾಲೂಕಿನ ಹುಲ್ಲತ್ತಿ ಗ್ರಾಮದ ವಂದೇ ಮಾತರಂ ಯುವಕ ಸ್ವಯಂ ಸೇವಾ ಸಮಿತಿ ಸದಸ್ಯರು ವಿರಕ್ತ ಮಠದ ಗುರುಬಸವ ಸ್ವಾಮೀಜಿ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗುರುಬಸವ ಸ್ವಾಮೀಜಿ ಮಾತನಾಡಿ, ಭ್ರಷ್ಟಾಚಾರ ಸಾಮಾಜಿಕ ಪಿಡುಗಾಗಿ ವ್ಯಾಪಿಸಿದೆ. ಅದು ಸಮಾಜಕ್ಕೆ ಅಂಟಿದ ದೊಡ್ಡ ರೋಗ. ರಾಷ್ಟ್ರದ ಘನತೆ-ಗೌರವಗಳಿಗೆ ಕುಂದು ತರುತ್ತಿರುವ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೂಗೆಯಲು ಜನಲೋಕಪಾಲ ಮಸೂದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಸಮಿತಿ ಅಧ್ಯಕ್ಷ ಜಗದೀಶ ಕೆರೂಡಿ ಮಾತನಾಡಿ, ಭ್ರಷ್ಟಾಚಾರಕ್ಕೆ ಜನ ಲೋಕಪಾಲ್ ಮಸೂದೆಯೇ ಮದ್ದು. ಅಣ್ಣಾ ಹಜಾರೆ, ನ್ಯಾ. ಸಂತೋಷ ಹೆಗ್ಡೆ, ಕಿರಣ್ ಬೇಡಿ, ಅರವಿಂದ ಕೇಜ್ರಿವಾಲ್, ಶಾಂತಿಭೂಷಣ್ ಹಾಗೂ ದೇಶದ ಸಾರ್ವಜನಿಕರ ಅಭಿಪ್ರಾಯದ ಆಧಾರದಲ್ಲಿ ರಚಿಸಲಾದ ಲೋಕಪಾಲ ಮಸೂದೆಯನ್ನೇ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ವಿ.ವಿ. ಹರಪನಹಳ್ಳಿ, ಮಂಜುನಾಥ ಕೂರಗುಂದ, ಮಾಲತೇಶ ಕಜ್ಜರಿ, ಮಾರುತಿ ಕೂರಗುಂದ, ನಾಗರಾಜ ಓಲೇಕಾರ, ಸಂತೋಷ ವಡ್ಡರ, ಅಮರನಾಥ ಭೂತೆ ಮಾತನಾಡಿದರು. ಪ್ರತಿಭಟನಕಾರರು ರಕ್ತಾಕ್ಷರಗಳ ಮನವಿಪತ್ರವನ್ನು ಉಪತಹಸೀಲ್ದಾರ್ ಹಿರೇಮಠಗೆ ಸಲ್ಲಿಸಿದರು. ಮಾಲತೇಶ ಬೂದನೂರು, ರಜನೀಕಾಂತ ವಡ್ಡರ, ರವಿ ಕೆರೂಡಿ, ಬಸವರಾಜ ಹಳ್ಳಿ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.