ಜನವರಿಯಿಂದ ಮನೆಮನೆಗೆ ಬಿಜೆಪಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಹಾವೇರಿ, ಡಿ. 18
ನರೇಂದ್ರ ಮೋದಿ ಪ್ರಧಾನಿಯನ್ನಾಗಿ ಮಾಡಲು ಬೆಂಬಲಿಸುವಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಜನವರಿ ತಿಂಗಳಿಂದ ಮನೆಮನೆಗೆ ಬಿಜೆಪಿ ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಮೋರ್ಚಾದ ರಾಜ್ಯಾಧ್ಯಕ್ಷೆ ಶಶಿಕಲಾ ಜೊಲ್ಲೆ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳೆಯರನ್ನು ಸಂಘಟಿಸುವ ಕಾರ್ಯ ಆರಂಭವಾಗಿದೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವುದರ ಜತೆಗೆ ಅವರು ರಾಜಕೀಯದಲ್ಲೂ ಮುಂದೆ ಬರುವಂತೆ ಮಾಡುವುದು ಉದ್ದೇಶವಾಗಿದೆ. ಲೋಕಸಭೆ ಚುನಾವಣೆ ವೇಳೆಗೆ ಸಂಘಟನೆಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ. ಆದ್ದರಿಂದ ಪ್ರತಿ ಬೂತ್ ಮಟ್ಟದಲ್ಲಿ ತಲಾ ಇಬ್ಬರು ಮಹಿಳೆಯರನ್ನು ಜೋಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಜನವರಿ ತಿಂಗಳಲ್ಲಿ ಮನೆಮನೆಗೆ ಬಿಜೆಪಿ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಸಂಘಟನೆಗೆ ಒತ್ತು ನೀಡಲಾಗಿದೆ. ರಾಜ್ಯದ 30 ಜಿಲ್ಲಾ ಘಟಕಗಳ ಕಾರ್ಯಕಾರಿಣಿ ಸಭೆ ನಡೆಸಲಾಗಿದೆ. ಮುಂದಿನ ಹಂತದಲ್ಲಿ ವಿಧಾನಸಭೆ, ಮಂಡಳ ಹಾಗೂ ಬೂತ್ ಮಟ್ಟದಲ್ಲೂ ಸಭೆ ನಡೆಸಿ, ಮಹಿಳಾ ಕಾರ್ಯಕರ್ತರನ್ನು ಒಂದುಗೂಡಿಸುವ ಪ್ರಯತ್ನ ನಡೆಸಲಾಗಿದೆ. ಮತದಾರರಲ್ಲಿ ಮಹಿಳೆಯಲೂ ಅರ್ಧದಷ್ಟಿದ್ದು, ಬರುವ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸೀಟು ನೀಡುವಂತೆ ನಾಯಕರಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಕನಿಷ್ಠ 12 ಕ್ಷೇತ್ರಗಳನ್ನು ಮಹಿಳೆಯರಿಗೆ ನೀಡುವಂತೆ ಕೇಳಿಕೊಳ್ಳಲಾಗಿದೆ. ಪಕ್ಷದ ವರಿಷ್ಠರು ಇದಕ್ಕೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ರಾಜ್ಯ ಕಾರ್ಯದರ್ಶಿ ಭಾರತಿ ಜಂಬಗಿ, ರಾಜ್ಯ ಪ್ರದಾನ ಕಾರ್ಯದರ್ಶಿ ಭಾರತಿ ಮಗದುಮ್ಮ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ಕರಬಸಮ್ಮನವರ, ಪ್ರಭು ಹಿಟ್ನಳ್ಳಿ, ಎಸ್.ಆರ್. ಹೆಗಡೆ, ಬಿಜೆಪಿ ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ ಇತರರು ಇದ್ದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಡಾ. ಶೋಭಾ ನಿಸ್ಸೀಮಗೌಡ್ರ, ಮಹಿಳಾ ಮೋರ್ಚಾ ಹಿರೇಕೆರೂರು ಅಧ್ಯಕ್ಷೆ ಗಿರಿಜಮ್ಮ ಸುತ್ತಕೋಟಿ, ಹಾನಗಲ್ ಅಧ್ಯಕ್ಷೆ ಗೌರಮ್ಮ ಪೂಜಾರ, ಜಿಲ್ಲಾ ಉಪಾಧ್ಯಕ್ಷೆ ಮಾಲಾ ಮಾದರ, ತಾಲೂಕು ಪಂಚಾಯಿತಿ ಸದಸ್ಯೆ ಪೂರ್ಣಿಮಾ ಕುರುವತ್ತಿ, ರಾಜ್ಯ ಎಸ್ಸಿಎಸ್ಟಿ ವಿಭಾಗದ ಅಧ್ಯಕ್ಷ ಮಂಜುನಾಥ ಓಲೆಕಾರ, ನಗರಸಭೆ ಸದಸ್ಯೆ ಗೀತಾ, ರೇಣುಕಾ ಪೂಜಾರ, ರತ್ನಾ ಕಾಶಪ್ಪನವರ, ಗೀತಾ ಜಂಬಗಿ, ರೈತ ಮೋರ್ಚಾದ ನಿಂಗಪ್ಪ, ಬಸಮ್ಮ ಅಬಲೂರ, ಸೌಭಾಗ್ಯ ಹಿರೇಮಠ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

