ಹಾವೇರಿ

ವಿವಿಧ ಬೇಡಿಕೆ ಈಡೇರಿಸಲು ಸಿಎಂಗೆ ಮನವಿ

Published On :

ಶಿಗ್ಗಾಂವಿ:  ರಾಜ್ಯ ಕಾರ್ಮಿಕರ ಹಿತ ರಕ್ಷಣಾ ಮತ್ತು ಜಾಗೃತಿ ವೇದಿಕೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಫಕ್ಕಿರೇಶ ಶಿಗ್ಗಾಂವಿ ಮನವಿ ನೀಡಿದರು.
ಹೊಸದಾಗಿ ಮದ್ಯದ ಅಂಗಡಿಗಳನ್ನು ತೆರೆಯುವ ವಿಚಾರವನ್ನು ಕೈಬಿಡಬೇಕು. ಹೊಸ ಮರಳು ನೀತಿ ಜಾರಿಯಿಂದಾಗಿ ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ನಿರುದ್ಯೋಗಿಗಳಾಗಲಿದ್ದಾರೆ. ಅಲ್ಲದೆ ಅವರಿಗೆ ಪರ್ಯಾಯ ಉದ್ಯೋಗ ಕಲ್ಪಿಸಿಕೊಡಬೇಕು ಮತ್ತು ಮರಳು ದೊರಕಿಸಿಕೊಡುವ ವ್ಯವಸ್ಥೆ ಮಾಡಿಕೊಡಬೇಕು. ಎಲ್ಲ ವರ್ಗದವರಿಗೂ ಶಾಧಿಬಾಗ್ಯ ಯೋಜನೆ ವಿಸ್ತರಿಸಬೇಕು. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿದ ಕಾರ್ಮಿಕರಿಗೆ ವೇತನ ಪಾವತಿಸುವಂತೆ ಸಂಬಂಧ ಪಟ್ಟವರಿಗೆ ಆದೇಶಿಬೇಕು ಎಂದು ಮನವಿ ಮಾಡಿದರು. ಪಶುಸಂಗೋಪನಾ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಪ್ರವೇಶ ಪಡೆಯಬೇಕಾದರೆ ಗ್ರಾಮಾಂತರ ಮಟ್ಟದಲ್ಲಿ 1ರಿಂದ 10ನೇ ತರಗತಿ ವರೆಗೆ ಕಡ್ಡಾಯವಾಗಿ ವ್ಯಾಸಂಗ ಮಾಡಿದರೆ ಮಾತ್ರ ಪ್ರವೇಶ ಎಂಬುವ ಷರತ್ತನ್ನು ಸಡಲಿಸಬೇಕು. ಗ್ರಾಮಾಂತರ ಮಟ್ಟದಲ್ಲಿ ಅವ್ಯಾಹತವಾಗಿ ಸಾರಾಯಿ ಮಾರಾಟ ನಡೆಯುತ್ತಿರುವುದನ್ನು ಬಂದ್ ಮಾಡಿ ಹಳ್ಳಿಗಳನ್ನು ಸಾರಾಯಿ ಮುಕ್ತವಾಗಿ ಪರಿವರ್ತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.
ಜಿಲಾನ ಜಂಗ್ಲಿ, ಇಮಾಹುಸೇನ್ ಅದಂಬಾಯಿ, ಶಂಕರ ಶಿವಳ್ಳಿ, ನಿಂಗಪ್ಪ ಶಿವಳ್ಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.