ಗುತ್ತಿಗೆದಾರರಿಗೂ ಪರಿಹಾರ: ಮನವಿ
ಶಿಗ್ಗಾಂವಿ: ಕಾಮಗಾರಿ ನಿರ್ವಹಿಸಿದ ಬಿಲ್ ಪಾವತಿಯಾಗದೆ ಸಾಲಬಾಧೆಯಿಂದ ಬಿಬಿಎಂಪಿ ಗುತ್ತಿಗೆದಾರ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರು, ಕಲಾವಿದರಂತೆ ತಮಗೂ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸ್ಥಳೀಯ ಗುತ್ತಿಗೆದಾರರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು.
ಗುತ್ತಿಗೆದಾರರ ಸಾವಿಗೆ ಸರ್ಕಾರಗಳು ಸ್ಪಂದಿಸದೇ ಇರುವುದು ದುರ್ದೈವದ ಸಂಗತಿ. ಸಾಲ-ಸೋಲ ಮಾಡಿ, ಗುತ್ತಿಗೆ ಕೆಲಸಗಳನ್ನು ನಿರ್ವಹಿಸುತ್ತಾ ಜೀವನ ಮಾಡುವ ನೋಂದಾಯಿತ ಸಿವಿಲ್ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಜೀವವಿಮೆ ಸೌಲಭ್ಯ ಕಲ್ಪಿಸಬೇಕು. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡರೆ ಅಥವಾ ಆಕಸ್ಮಿಕವಾಗಿ ಮೃತಪಟ್ಟರೆ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಶಿಗ್ಗಾಂವಿ ತಾಲೂಕು ಕಾರ್ಯನಿರತ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ ಮಣ್ಣನವರ, ಎನ್.ಎಸ್. ಹಿರೇಮಠ, ಎನ್.ಎಸ್. ಪಾಟೀಲ, ಜೆ.ಎಸ್. ಹಿರೇಮಠ, ಸಿದ್ದರಾಮಗೌಡ ಪಾಟೀಲ, ದಾದಾಪೀರ ಮುಲ್ಲಾ, ರಮೇಶ ಮಸಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

