ಕೀಳರಿಮೆ ಬೇಡ: ಲಮಾಣಿ
ಹಾವೇರಿ: ಕ್ರೀಡೆ, ಸಂಗೀತ, ನೃತ್ಯ ಮುಂತಾದ ಎಲ್ಲ ಕ್ಷೇತ್ರಗಳಲ್ಲೂ ವಿಕಲಾಂಗರು ಸಾಧನೆ ಮಾಡಿದ್ದಾರೆ. ಕೀಳರಿಮೆ ತೊರೆದು, ಸರ್ಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಂಡು, ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಹೊಸಮಠ ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು, ಜಿಲ್ಲಾ ಅಂಗವಿಕಲರ ಸಂಘ, ಹಾವೇರಿ ಜಿಲ್ಲಾ ಅಂಗವಿಕಲರ ವಿಶೇಷ ಶಾಲೆ ನೌಕರರ ಸಂಘ ಹಾಗೂ ಎಸ್ಜೆಎಂ ದೈಹಿಕ ಅಂಗವಿಕಲರ ವಸತಿಯುತ ಪ್ರೌಢಶಾಲೆ ಆಶ್ರಯದಲ್ಲಿ ಜರುಗಿದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಕಲಾಂಗರಿಗೆ ಮಾಸಾಶನ, ಉಚಿತ ಬಸ್ ಪಾಸ್ ಹಾಗೂ ದ್ವಿಚಕ್ರ ವಾಹನ ವಿತರಿಸಲಾಗುತ್ತಿದೆ. ಅಂಗವಿಕಲರ ಸಮಸ್ಯೆಗೆ ಸ್ಪಂದಿಸಲು ಅಂಗವಿಕಲ ವ್ಯಕ್ತಿಯನ್ನು ಆಯುಕ್ತರನ್ನಾಗಿ ಮಾಡಿದೆ ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಸ್.ಎಸ್. ಅಡಿಗ, ವೈಕಲ್ಯ ಶಾಪವಲ್ಲ. ಅದನ್ನು ಮೆಟ್ಟಿ ನಿಲ್ಲಬೇಕು. ಸರ್ಕಾರ ಅಂಗವಿಕಲರಿಗೆ ಯೋಜನೆ ರೂಪಿಸಿದೆ. ದೈಹಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಅಗತ್ಯ. ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಪುಟ್ಟಪ್ಪ ಜಲದಿ ಕಾರ್ಯಕ್ರಮ ಉದ್ಘಾಟಿಸಿದರು. ಅಂಗವಿಕಲರ ಸಂಘದ ರಾಜ್ಯಾಧ್ಯಕ್ಷ ಅಲ್ಲಾಭಕ್ಷ, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಎಸ್ಪಿ ಎನ್. ಶಶಿಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

