ಪಹಣಿಯಲ್ಲಿ ಬೆಳೆ ದಾಖಲಾತಿ ಬರೆಯಲು ಸೂಚನೆ
ಹಾವೇರಿ: ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿ ಋತುಮಾನವಾರು ಹಾಗೂ ಪ್ರತಿ ಗ್ರಾಮವಾರು ಪಹಣಿಯಲ್ಲಿ ಬೆಳೆ ದಾಖಲಾತಿ ಕಾರ್ಯವನ್ನು ಕಡ್ಡಾಯವಾಗಿ ಬರೆಯಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಸ್.ಎಚ್. ಪಾಟೀಲ ಹೇಳಿದರು.
ನಗರದ ನೌಕರರ ಭವನದಲ್ಲಿ ಜರುಗಿದ ಪಹಣಿಯಲ್ಲಿ ಬೆಳೆ ದಾಖಲಾತಿ ಮತ್ತು ಬೆಳೆ ಕಟಾವು ಪ್ರಯೋಗಗಳ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಬೆಳೆ ಕಟಾವು ಪ್ರಯೋಗಗಳ ಕಾರ್ಯ ಸರಿಯಾಗಿ ಮಾಡಬೇಕೆಂದು ಶಿಬಿರಾರ್ಥಿಗಳಿಗೆ ತಿಳಿಸಿದರು. ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ಕಾರ್ಯಾಗಾರ ಉದ್ಘಾಟಿಸಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಡಿ. ಕೊರಚರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಾ ಉಕ್ಕುಂದ ಭಾಗವಹಿಸಿದ್ದರು. ಕಂದಾಯ ಇಲಾಖೆ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕೃಷಿ ಇಲಾಖೆ ಅಧಿಕಾರಿಗಳು, ರೈತ ಅನುವುಗಾರರು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿಗಳು ಉಪಸ್ಥಿತರಿದ್ದರು. ಸಾಂಖ್ಯಿಕ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ವೈ. ಮೀಶೆ, ಸಹಾಯಕ ಸಾಂಖ್ಯಿಕ ಅಧಿಕಾರಿ ಪಿ.ಎಚ್. ಶ್ಯಾಗೋಟಿ ತರಬೇತಿ ನೀಡಿದರು. ಶಿಬಿರಾರ್ಥಿಗಳನ್ನು ದೇವಗಿರಿಯಲ್ಲಾಪುರ ಗ್ರಾಮಕ್ಕೆ ಕರೆದೊಯ್ದು ಪ್ರಾಯೋಗಿಕವಾಗಿ ಹತ್ತಿ ಬೆಳೆಯ ಕಟಾವು ಪ್ರಯೋಗ ಕೈಗೊಳ್ಳುವ ವಿಧಾನ ತೋರಿಸಲಾಯಿತು. ಎಸ್.ಬಿ. ಪಂಪಣ್ಣನವರ ನಿರೂಪಿಸಿದರು. ಸಾಂಖ್ಯಿಕ ನಿರೀಕ್ಷಕ ಜಿ.ವಿ. ಸುಕ್ತೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

