ಹಾವೇರಿ

ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಆಕರ್ಷಿಸಿ: ಬಣಕಾರ್ಚ

Published On :

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಡಿ. 22
ಎಲ್ಲ ಸೌಲಭ್ಯಗಳಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದರೂ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸುತ್ತಿಲ್ಲ. ಶಿಕ್ಷಕರು ಇನ್ನೂ ಹೆಚ್ಚು ಗುಣಮಟ್ಟದ ಶಿಕ್ಷಣ ನೀಡಲು ತರಬೇತುಗೊಳ್ಳಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಕರೆ ನೀಡಿದರು.
ತಾಲೂಕಿನ ಚೆನ್ನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ ಕ್ಲಸ್ಟರ್ ಮಟ್ಟದ ಶಾಲಾ ಕಲಿಕೋತ್ಸವ ಹಾಗೂ ನೂತನ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚಲುವಾದಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಶಿವಣ್ಣ ಗಡಿಯಣ್ಣನವರ, ಗ್ರಾಪಂ ಸದಸ್ಯ ಬಸವರಾಜ ಬೂಸೇರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಅನಂದ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಕೆಂಚಪ್ಪ ಗುಂಡಗಟ್ಟಿ, ಬಿಆರ್‌ಪಿ ಎಂ.ವಿ. ಕಮ್ಮಾರ, ಎಸ್‌ಡಿಎಂಸಿ ಅಧ್ಯಕ್ಷ ಜಯಪ್ಪ ಮಡಿವಾಳರ, ಮುಖ್ಯ ಶಿಕ್ಷಕ ಬಿ.ಎಂ. ಮಡಿವಾಳರ, ಸಿಆರ್‌ಪಿ ರಾಘವೇಂದ್ರ ಹಂಚಿನಮನಿ, ಶಿಕ್ಷಕರಾದ ಎಸ್.ಎಸ್. ಕೋರಿಗೌಡ್ರ, ವಿ.ಬಿ. ಹುಡೇದ ಇದ್ದರು. ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳು ತಮ್ಮ ಕಲೆ ಪ್ರದರ್ಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.