ತಂಬಾಕು ದುಷ್ಪರಿಣಾಮ ಅರಿಯಿರಿ: ನಾಯಕ
ಹಾವೇರಿ: ತಂಬಾಕು ಹಾಗೂ ಸಿಗರೇಟ್ ಸೇವನೆಯ ದುಷ್ಪರಿಣಾಮ ಹಾಗೂ ತಂಬಾಕು ನಿಷೇದ ಕಾಯ್ದೆ ಬಗ್ಗೆ ತಿಳಿವಳಿಕೆ ಇರಬೇಕೆಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಹೇಳಿದರು.
ಜಿಪಂ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕರ್ನಾಟಕದಲ್ಲಿ ತಂಬಾಕು ನಿಯಂತ್ರಣ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ ಸಾಮರ್ಥ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆ ಆಯುಕ್ತ ಶಿವಯೋಗಿ ಕಳಸದ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧಿಸಲಾಗಿದ್ದರೂ, ಕೆಲವರು ಧೂಪಮಾನ ಮಾಡುವುದನ್ನು ನೋಡುತ್ತೇವೆ. ಶಾಲಾ-ಕಾಲೇಜುಗಳಿಂದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ ಎಂದರು.
ರಾಜ್ಯ ಎಂಟಿ ತಂಬಾಕು ಸಲಹೆಗಾರ ಡಾ ಜಗನ್ನಾಥ ಮಾತನಾಡಿ, ದೇಶದಲ್ಲಿ ತಂಬಾಕು ಸೇವನೆ ಮಾಡುವವರ ಸಂಖ್ಯೆ 300 ದಶಲಕ್ಷ ತಲುಪಿದೆ. ಪ್ರತಿ ವರ್ಷ 30ರಿಂದ 40 ಲಕ್ಷ ಮಂದಿ ಹೃದಯ, ಶ್ವಾಸಕೋಶ ಕಾಯಿಲೆ ಅಥವಾ ಕ್ಯಾನ್ಸರ್ಗೆ ತುತ್ತಾಗುತ್ತಾರೆ. ಆಗೆಯುವ ತಂಬಾಕು ಬಳಕೆಯಿಂದಾಗಿ ಬಾಯಿ ಕ್ಯಾನ್ಸರ್ ತೋಗಕ್ಕೆ ತುತ್ತಾಗುವವರಲ್ಲಿ ಭಾರತೀಯರೇ ಹೆಚ್ಚು ಎಂದರು.
ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಮಾತನಾಡಿದರು. ಜಿಲ್ಲಾಸ್ಪತ್ರೆ ಹಿರಿಯ ಫಿಜಿಷಿಯನ್ ಡಾ ವಿಶ್ಬನಾಥ ಸಾಲಿಮಠ ಹಾಗೂ ದಂತ ವೈದ್ಯೆ ಡಾ ಕಲ್ಪನಾ ಉಪನ್ಯಾಸ ನೀಡಿದರು. ತಂಬಾಕು ನಿಯಂತ್ರಣಾಧಿಕಾರಿ ಹೇಮಂತರಾಜ ಅರಸ ಇದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಚ್.ಎಸ್. ರಾಘವೇಂದ್ರಸ್ವಾಮಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಫ್. ಕುರುವಳ್ಳಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

