ಸರ್ಕಾರಗಳಿಂದ ರೈತರಿಗೆ ಅನ್ಯಾಯ: ಮರಿಗೌಡ್ರ
ಶಿಗ್ಗಾಂವಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಅನ್ಯಾಯ ಮಾಡಿವೆ. ರೈತರಿಗೆ ಅಗತ್ಯ ಸೌಲಭ್ಯ ನೀಡಲು ಯಾವ ಸರ್ಕಾರವೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭಾರತಿಯ ಕೃಷಿಕ ಸಮಾಜದ ರಾಜ್ಯ ಉಪಾಧ್ಯಕ್ಷ ಎನ್.ಡಿ. ಮರಿಗೌಡ್ರ ಹೇಳಿದರು. ಭಾರತಿಯ ಕೃಷಿಕ ಸಮಾಜದ ವತಿಯಿಂದ ಪಟ್ಟಣದ ಹಳೆ ಬಸ್ ನಿಲ್ದಾಣದ ವೃತ್ತದಲ್ಲಿ ಸೋಮವಾರ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ವಿದ್ಯುತ್ ಹಾಗೂ ಬೆಳೆದ ಬೆಳೆಗಳಿಗೆ ನಿರ್ದಿಷ್ಟವಾದ ಬೆಲೆ ಕೊಡುವಂತಾಗಬೇಕು ಎಂದರು.
ಉತ್ತರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹನುಮಂತ ಎನ್. ಬಂಡಿವಡ್ಡರ ಮಾತನಾಡಿ, ಭಾರತವು ಕೃಷಿ ಆಧಾರಿತ ರಾಷ್ಟ್ರ. ಅನ್ನದಾತ ಈ ರಾಷ್ಟ್ರದ ಬೆನ್ನೆಲುಬು. ಆದರೂ ರೈತರ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಸರ್ಕಾರವೂ ರೈತರನ್ನು ಶೋಷಿಸುತ್ತಿದೆ. ರೈತರು ಅಕ್ರಮವಾಗಿ ಸಾಗುವಳಿ ಮಾಡುತ್ತಿರುವ ತುಂಡು ಭೂಮಿಯನ್ನು ಸಕ್ರಮಗೊಳಿಸಬೇಕು, ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ರು. 20 ಲಕ್ಷ ಪರಿಹಾರ ಕೊಡಬೇಕು. ಅವರ ಮಕ್ಕಳಿಗೆ ಉಚಿತವಾದ ಶಿಕ್ಷಣ ಒದಗಿಸಬೇಕು ಎಂದು ಆಗ್ರಹಿಸಿದರು.
ಹುತಾತ್ಮ ರೈತರಿಗಾಗಿ ಮೌನಾಚರಣೆ ಮಾಡಲಾಯಿತು. ನಾಗರಾಜ ಹಂಚಿನಮನಿ, ಉಮೇಶ ನಂದಣ್ಣವರ, ಪೋಲಿಸಗೌಡ್ರ, ಆನಂದ ದಾಸಪ್ಪನವರ, ರಮೇಶ ಚವ್ಹಾಣ ಇದ್ದರು. ವಿನಯರಾಜ ಹೊನ್ನಣ್ಣವರ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

