ಹಾವೇರಿ

ಸುದ್ದಿ ಸಂಕ್ಷೇಪ

Published On :

ಜ. 4ರಂದು ಸಿಎಂ ಭೇಟಿ
ಹಿರೇಕೆರೂರು: ಮಳಿಗೆ ಗ್ರಾಮ ಸಂಪರ್ಕಿಸಲು ಕುಮದ್ವತಿ ನದಿಗೆ ರು. 4.90 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಹಾಗೂ ರು. 10.53 ಲಕ್ಷ ವೆಚ್ಚದಲ್ಲಿ ಬಾಗಲಕೋಟೆ-ಬಿಳಿಗಿರಿ ರಂಗನ ಬೆಟ್ಟ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 4ರಂದು ಆಗಮಿಸಲಿದ್ದಾರೆಂದು ಮಾಜಿ ಶಾಸಕ ಬಿ.ಸಿ.  ಪಾಟೀಲ್ ತಿಳಿಸಿದರು. ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಎಚ್..ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಎಚ್.ಸಿ. ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಆಗಮಿಸಲಿದ್ದಾರೆ.  ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕರ್ತರ ಸಭೆ, ಪೌರ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಶಿವನಗೌಡ ರಟ್ಟಿಹಳ್ಳಿ, ಎಸ್.ಕೆ. ಕರಿಯಣ್ಣನವರ, ಮುಖಂಡರಾದ ದೊಡ್ಡಗೌಡ ಪಾಟೀಲ್, ಬಿ.ಎನ್. ಬಣಕಾರ, ಗುರುಶಾಂತ ಯತ್ತಿನಹಳ್ಳಿ ಇದ್ದರು.
ಜಿ.ಎಸ್. ಶಿವರುದ್ರಪ್ಪ ನಿಧನಕ್ಕೆ ಕಸಾಪ ಕಂಬನಿ
ರಾಣಿಬೆನ್ನೂರು: ಯುವ ಪೀಳಿಗೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಸಾಹಿತ್ಯದ ಗಂಭೀರ ಅಧ್ಯಯನ ಮಾಡಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಾನಂದ ಸಂಗಾಪುರ ಹೇಳಿದ್ದಾರೆ. ನಗರದ ಮೆಡ್ಲೇರಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಜಿ.ಬಿ. ಮಾಸಣಗಿ, ಜಿಲ್ಲಾ ಕಾರ್ಯದರ್ಶಿ ಪ್ರಭು ಹಲಗೇರಿ, ವಿ.ವಿ. ಹರಪನಹಳ್ಳಿ, ಎಸ್.ಬಿ. ಹರಿಹರ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಭಾರಿ ಅಧ್ಯಕ್ಷ ಎಂ. ಚಿರಂಜೀವಿ, ಕಾರ್ಯದರ್ಶಿ ಜೆ.ಎಚ್. ನೇಶ್ವಿ, ಮಾಜಿ ಉಪಾಧ್ಯಕ್ಷ ಸಾಬ್ಜನ ಇಟಗಿ, ಹಾಲೇಶ ಶಿವಪ್ಪನವರ, ಮಂಜುನಾಥ ಕುಂಬಳೂರು, ಜಿ.ವಿ. ದೀಪಾವಳಿ, ಸಂತೋಷ ಮಹಾಂತಶೆಟ್ಟರ, ಬಸವರಾಜ, ಗಿರೀಶ ಅಮ್ಮನವರ, ಶಿಕ್ಷಕರಾದ ಎಚ್.ಬಿ. ಬಣಕಾರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಡಿ. ಹೊಂಬರಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಜಿಎಸ್ಸೆಸ್ ನಿಧನ: ಸಂತಾಪ
ರಾಣಿಬೆನ್ನೂರು: ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ನಿಧನರಾಗಿದ್ದು, ಶಾಸಕ ಕೆ.ಬಿ. ಕೋಳಿವಾಡ, ಮಾಜಿ ಶಾಸಕ ಜಿ. ಶಿವಣ್ಣ ತಿಳುವಳ್ಳಿ, ನ್ಯಾಯವಾದಿ, ಬಿಜೆಪಿ ಎಸ್ಸಿ-ಎಸ್ಟಿ ರಾಜ್ಯ ಅಧ್ಯಕ್ಷ ಮಂಜುನಾಥ ಓಲೇಕಾರ, ನಗರಸಭೆ ಪ್ರಭಾರಿ ಅಧ್ಯಕ್ಷ ಶಿವಣ್ಣ ಮಣೇಗಾರ, ಮಾಜಿ ಅಧ್ಯಕ್ಷ ರಾಮಣ್ಣ ಕೋಲಕಾರ, ಕಿರಣ ಅಂಗಡಿ, ರಾಜಣ್ಣ ಸುರಳಿಕೇರಿಮಠ, ನಗರಸಭಾ ಸದಸ್ಯರಾದ ಪುಟ್ಟಪ್ಪ ಮರಿಯಮ್ಮನವರ, ಮಾಜಿ ಉಪಾಧ್ಯಕ್ಷ ಪ್ರಕಾಶ ಪೂಜಾರ, ಪ್ರಭುಸ್ವಾಮಿ ಕರ್ಜಗಿಮಠ, ಶೇಖಪ್ಪ ಹೊಸಗೌಡ್ರ, ಶಶಿಧರ ಬಸೆನಾಯ್ಕರ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.