ಶಿಗ್ಗಾಂವಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಜಕ್ಕಣ್ಣವರ
ಶಿಗ್ಗಾಂವಿ: ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಚನ್ನಪ್ಪ ಅಂದಾನೆಪ್ಪ ಜಕ್ಕಣ್ಣವರ, ಉಪಾಧ್ಯಕ್ಷರಾಗಿ ನೀಲವ್ವ ಚನ್ನಬಸಪ್ಪ ವಾಲಿಶೆಟ್ಟರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ರಾಜಿನಾಮೆಯಿಂದ ತೆರವಾಗಿದ್ದ ಕಾರಣ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಚನ್ನಪ್ಪ ಜಕ್ಕಣ್ಣವರ, ಉಪಾಧ್ಯಕ್ಷ ಸ್ಥಾನಕ್ಕೆ ನೀಲವ್ವ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಕೆ. ಸಜ್ಜನ ಘೋಷಿಸಿದರು.
ನೂತನ ಅಧ್ಯಕ್ಷ ಚನ್ನಪ್ಪ ಅಂದಾನೆಪ್ಪ ಜಕ್ಕಣ್ಣವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ರೈತರ ಹಾಗೂ ಸದಸ್ಯರ ಗಣನೆಗೆ ತೆಗೆದುಕೊಂಡು ಅಭಿವೃದ್ಧಿ ಪಥದತ್ತ ಸಂಸ್ಥೆಯನ್ನು ಒಯ್ಯಲು ಶ್ರಮಿಸುವುದಾಗಿ ಭರವಸೆ ನೀಡಿದರು.
ವೀರಪ್ಪ ರಾಯಣ್ಣವರ, ಶಿವಾನಂದ ಕೂಲಿ, ರವಿ ಕುಡವಕ್ಕಲಿಗಾರ, ಶೇಖಪ್ಪ ಹಾದಿಮನಿ, ನೀಲಕಂಠಪ್ಪ ಗೊರವಿ, ಕರಬಸಪ್ಪ ಹುಬ್ಬಳ್ಳಿ, ಬಸವರಾಜ ಹೇಸರೂರ, ಶೇಖಪ್ಪ ಹರಕುಣ್ಣಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಣ್ಣ ಸಾಥಣ್ಣವರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

