ಹಾವೇರಿ

ಕೃಷಿ ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಸಿ

Published On :

ಹಾನಗಲ್ಲ: ಕೃಷಿ ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದ ಕುಮಾರೇಶ್ವರ ವಿರಕ್ತಮಠದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಆಲ್ ಇಂಡಿಯಾ ಕಿಸಾನ್ ಸಭಾ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಪ್ರಭಾರಿ ತಹಸೀಲ್ದಾರ್ ಸವಣೂರ ಅವರಿಗೆ ಸಲ್ಲಿಸಲಾದ ಮನವಿಯಲ್ಲಿ, ತಾಲೂಕಿನಲ್ಲಿರುವ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಲು ಸಲ್ಲಿಸಲಾಗಿರುವ ಅರ್ಜಿಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು. ಮರಗಳೇ ಇಲ್ಲದ ಅರಣ್ಯ ಇಲಾಖೆ, ಕಂದಾಯ ಮತ್ತು ಬೇಚಾರಕ ಭೂಮಿಯಲ್ಲಿ ಮಾಡಿಕೊಂಡಿರುವ ಅಕ್ರಮ ಸಾಗುವಳಿಯ ಪ್ರಕರಣಗಳನ್ನು ಸಕ್ರಮಗೊಳಿಸಬೇಕು. ಅರಣ್ಯ ಇಲಾಖೆ ವಶದಲ್ಲಿರುವ ಭೂಮಿಯಲ್ಲಿ 1967ರಿಂದಲೇ ಅಧಿಕೃತವಾಗಿ ಸಾಗುವಳಿ ಮಾಡಿಕೊಂಡು ಬಂದಿರುವ ಸಾಗುವಳಿದಾರ ರೈತರನ್ನು ಒಕ್ಕಲೆಬ್ಬಿಸದೆ ಅವರಿಗೆ ಪಟ್ಟಾ ನೀಡಬೇಕು. ಕೃಷಿಯೋಗ್ಯ ಸರ್ಕಾರಿ ಭೂಮಿ ಮತ್ತು ಹೆಚ್ಚುವರಿ ಖಾಸಗಿ ಭೂಮಿಯನ್ನು ಬೇಸಾಯ ಮಾಡಲಿಚ್ಛಿಸುವ ಬಡವರಿಗೆ ವಿತರಿಸಬೇಕು ಎಂದು ಆಗ್ರಹಿಸಲಾಗಿದೆ.
ಕಿಸಾನ್ ಸಭಾ ತಾಲೂಕು ಘಟಕದ ಅಧ್ಯಕ್ಷ ಸಹದೇವಪ್ಪ ಕರಬಣ್ಣನವರ, ಕಾರ್ಯದರ್ಶಿ ವಿಶ್ವನಾಥ ತುಪ್ಪದ, ಕೃಷಿ ಕೂಲಿ ಕಾರ್ಮಿಕರ ಸಂಘದ ಜನಾರ್ದನ, ಹೊನ್ನಪ್ಪ ಮರೆಮ್ಮನವರ, ಗೀತಾ ಕಟಗಿ, ಎ.ಜಿ. ಮುದೋಳ, ಫಕ್ಕೀರಪ್ಪ ಗುಂಡೂರ, ಪ್ರಭಾಕರ ಬಿಡ್ನಾಳ, ಫೀದಾ ಬಾಳಂಬೀಡ, ಗುಡ್ಡಪ್ಪ ಕಾಸಂಬಿ, ಪ್ರೇಮಾ ಕಲಕೇರ, ದಾವಲಸಾಬ ನೆಗಳೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.