ದೇಶದ ಏಳ್ಗೆಗೆ ಕಾಂಗ್ರೆಸ್ ಸೇವೆ: ಶಾಸಕ ಮನೋಹರ ತಹಶೀಲ್ದಾರ
ಹಾವೇರಿ: ಪರಕೀಯರ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಜನ್ಮ ತಾಳಿತು. ಅಂದಿನಿಂದ ಪಕ್ಷ ಹಾಗೂ ನಾಯಕರು ದೇಶದ ಏಳ್ಗೆಗೆ ಅವಿತರ ಶ್ರಮಿಸುತ್ತಿದ್ದಾರೆ ಎಂದು ಶಾಸಕ ಮನೋಹರ ತಹಶೀಲ್ದಾರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಕಾಂಗ್ರೆಸ್ 129ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಪಂ. ಜವಾಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಬಂದ ಮೇಲೆ 60 ವರ್ಷ ಕಾಂಗ್ರೆಸ್ ದೇಶವನ್ನು ಆಳಿದೆ. ಆಹಾರ ಕೊರತೆ ಎದುರಿಸುವ ಸಂದರ್ಭದಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಹಸಿರು ಕ್ರಾಂತಿ ಮಾಡಿದೆ ಎಂದರು. ಸ್ವಾತಂತ್ರ್ಯ ಹೋರಾಟಗಾರ ನಾರಾಯಣ ಕರ್ಪೂರ ಸನ್ಮಾನ ಸ್ವೀಕರಿಸಿ ಮಾತನಾಡಿ, ಅಸಹಕಾರ ಚಳವಳಿ ಸಂದರ್ಭದಲ್ಲಿ ಹೊಸರಿತ್ತಿಯಲ್ಲಿ ಹಫ್ತೆ ಲೂಟಿ ಮಾಡುತ್ತಿದ್ದಾಗ ಪೊಲೀಸರ ಗುಂಡಿಗೆ ಬಲಿಯಾದ ಹುತಾತ್ಮ ಮೈಲಾರ ಮಹಾದೇವ ಅವರ ಪುತ್ಥಳಿ ಇರುವ ಜಾಗೆಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು. ಜಯಶ್ರೀ ಶಿವಪುರ, ಎಸ್.ಎಫ್. ಎನ್ ಗಾಜಿಗೌಡರ, ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ ಮಾತನಾಡಿದರು. ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ರಮೇಶ ಕಡಕೋಳ, ಶಿವಯೋಗಿ ಹಿರೇಮಠ, ಪ್ರಕಾಶ ಜೈನ್, ಎ.ಎ. ಪಠಾಣ, ಲಲಿತಮ್ಮ ಹುಗ್ಗಿ, ಮಾದೇವಣ್ಣ ಬಾಸೂರ ಇದ್ದರು. ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಸ್ವಾಗತಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ನಾರಾಯಣರಾವ್ ಕರ್ಪೂರ, ಫಕ್ಕೀರಯ್ಯ ಕುಲಕರ್ಣಿ, ಶೇಖವ್ವ ಸುಣಗಾರ, ನಾಗವ್ವ ಇಂಡಿ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

