ಜ. 4: ಹಿರೇಕೆರೂರಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 4ರಂದು ಹಿರೇಕೆರೂರಿಗೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜ. 4ರಂದು ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.50ಕ್ಕೆ ಹಿರೇಕೆರೂರು ಹೆಲಿಪ್ಯಾಡ್ಗೆ ಆಗಮಿಸುವರು. ಬೆಳಗ್ಗೆ 11 ಗಂಟೆಗೆ ಹಿರೇಕೆರೂರು ತಾಲೂಕಿನಲ್ಲಿ ನಬಾರ್ಡ್ ಆರ್ಐಡಿಎಫ್ ಯೋಜನೆ ಅಡಿಯಲ್ಲಿ ರಟ್ಟಿಹಳ್ಳಿ ಮಳಗಿ ಕಣವಿಸಿದ್ದೇಶ್ವರ ರಸ್ತೆಯ ಕಿ.ಮೀ. 6ರಲ್ಲಿ ಕುಮದ್ವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಹಾಗೂ 13ನೇ ಹಣಕಾಸು ಯೋಜನೆಯಲ್ಲಿ ಹಿರೇಕೆರೂರು ಪಟ್ಟಣ ಪರಿಮಿತಿಯಲ್ಲಿ ಹಾವೇರಿ-ಸಾಗರ ರಸ್ತೆಯ 1 ಕಿ.ಮೀ. ಉದ್ದದ ಮರು ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವರು. 11.30ಕ್ಕೆ ಹಿರೇಕೆರೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಹಿರೇಕೆರೂರು ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಕನವಳ್ಳಿ ಗ್ರಾಮದೇವತೆ ಜಾತ್ರೆ ನಾಳೆಯಿಂದ
ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದೇವತೆ ಜಾತ್ರಾ ಮಹೋತ್ಸವ ಜ. 1ರಿಂದ 10ರ ವರೆಗೆ ನಡೆಯಲಿದೆ. ಜ. 1ರಂದು ಸಂಜೆ ದೇವಿ ಪ್ರತಿಷ್ಠಾಪನೆ, ಜ. 2ರಂದು ನವಶಕ್ತಿ ಆಹ್ವಾನ ಹಾಗೂ ಗ್ರಾಮ ದಿಗ್ಬಂಧನ, 3ರಂದು ದೇವಿ ಉಡಿ ತುಂಬುವುದು, ಜ. 4ರಿಂದ 6ರ ವರೆಗೆ ಗಟ್ಟಿ ಗಡಿಗೆ ಪೂಜೆ, ದೀಪೋತ್ಸವ ಇದೆ. ಜ. 8ರಿಂದ 10ರ ವರೆಗೆ ಧಾರ್ಮಿಕ -ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಅಂಚೆ ಇಲಾಖೆ ಉದ್ಯೋಗ
ಹಾವೇರಿ: ಬೆಂಗಳೂರಿನ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಅವರು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ. ಎಸ್ಸೆಸ್ಸೆಲ್ಸಿ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿದ ಹಾಗೂ ಜ. 13ಕ್ಕೆ 18ರಿಂದ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು ಎಂದು ಹಾವೇರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

