ಹಾವೇರಿ

ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ: ಭಾಸ್ಕರರಾವ್

Published On :

ಹಾವೇರಿ: ದಿನದ ಇಪ್ಪತ್ನಾಲ್ಕು ಗಂಟೆ ಕರ್ತವ್ಯದಲ್ಲಿ ತೊಡಗಿ ದೈಹಿಕ ಹಾಗೂ ಮಾನಸಿಕವಾಗಿ ಬಸವಳಿಯುವ ಪೊಲೀಸರಿಗೆ ಯೋಗ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನವ ಚೈತನ್ಯ ಮೂಡಿಸಿ ಒತ್ತಡದಿಂದ ಹೊರಬರಲು ಸಹಕಾರಿಯಾಗಿವೆ ಎಂದು ಉತ್ತರವಲಯದ ಪೊಲೀಸ್ ಮಹಾನಿರ್ದೇಶಕ ಭಾಸ್ಕರರಾವ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಗಂಣದಲ್ಲಿ ಎರಡು ದಿನಗಳ ಕಾಲ ನಡೆದ ಪೊಲೀಸ್ ಇಲಾಖೆಯ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾ ಮನೋಭಾವ ಮುಖ್ಯ. ಕ್ರೀಡೆಗಳು ಮಾನವನ್ನು ಸದಾ ಕ್ರಿಯಾಶೀಲರನ್ನಾಗಿ ಇಡಲು ಸಹಾಯಕವಾಗುತ್ತವೆ. ಅಲ್ಲದೇ ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ. ಸಿಬ್ಬಂದಿ ತಮಗೆ ಇಷ್ಟವಿರುವ ಆಟದ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕ್ರೀಡಾಕೂಟಗಳು ಎಲ್ಲ ಸಿಬ್ಬಂದಿಯನ್ನು ಸ್ವಲ್ಪ ಸಮಯ ಒಂದೆಡೆ ಸೇರುವಂತೆ ಮಾಡಿ ಉತ್ತಮ ಬಾಂಧವ್ಯ ಮೂಡಿಸಲು ಸಹಕಾರಿಯಾಗುತ್ತದೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯನ್ನು ರಾಜ್ಯ ಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ ಶ್ವೇತಾ ನಾಯ್ಡು ಅವರನ್ನು ಸನ್ಮಾನಿಸಲಾಯಿತು. ನಂತರ ಐಜಿಪಿ ಭಾಸ್ಕರರಾವ್ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಆರ್. ಕುಲಕರ್ಣಿ, ಎಎಸ್ಪಿ ಡಿ.ಎಸ್. ಜಗಮೈನವರ ಸೇರಿದಂತೆ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಇದ್ದರು. ಎಸ್ಪಿ ಎನ್.ಶಶಿಕುಮಾರ ಸ್ವಾಗತಿಸಿದರು.  




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.