ಶಾಲೆ ಸಮಾಜದ ಆಸ್ತಿ: ದೊಡ್ಮನಿ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಫೆ. 1
ಶಾಲೆಗಳು ಸಮಾಜದ ಆಸ್ತಿ. ಅವುಗಳಿಗೆ ಸೂಕ್ತ ರಕ್ಷಣೆ ಒದಗಿಸಿ ಗ್ರಾಮದ ಜನರ ಉಪಯೋಗಕ್ಕೆ ನೀಡುವಂತಾಗಬೇಕೆಂದು ಮಲ್ಲಪ್ಪ ದೊಡ್ಮನಿ ಅಭಿಪ್ರಾಯಪಟ್ಟರು.
ತಾಲೂಕಿನ ಗುಡ್ಡದಮಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಲಪ್ಪ ಬಿಷ್ಠಣ್ಣನವರ ಸ್ಮರಣಾರ್ಥ ನಿರ್ಮಿಸಲಾದ ನೂತನ ಮುಖ್ಯದ್ವಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಪ್ರತಿಯೊಬ್ಬರ ಹಕ್ಕು. ವಿದ್ಯಾದೇಗುಲಗಳ ಅಭಿವೃದ್ಧಿಯಿಂದ ಸಮಾಜದ ಪ್ರತಿಯೊಬ್ಬರಿಗೂ ಇದರ ಸೌಲಭ್ಯಗಳು ಸಿಗುವಂತಾಗಬೇಕು. ಜನರು ಶಿಕ್ಷಣವಂತರಾಗುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದರು.
ಕಾರವಾರ ಗೃಹರಕ್ಷಕ ದಳದ ಕಮಾಂಡೆಂಟ್ ಗಣೇಶ ಬಿಷ್ಠಣ್ಣನವರ ಮಾತನಾಡಿ, ಉನ್ನತ ಜೀವನಕ್ಕೆ ನೆಲೆಯಾಗಿರುವ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದಾಗ ಮಾತ್ರ ಸಮಾಜದ ಅಲ್ಪ ಋಣ ತೀರಿಸಲು ಸಾಧ್ಯ ಎಂದು ಹೇಳಿದರು.
ಮುಖ್ಯೋಪಾಧ್ಯಾಯ ಸಿ.ಎಂ. ದಾನಪ್ಪನವರ, ಗ್ರಾಪಂ ಸದಸ್ಯರಾದ ಪ್ರಭು ದೇಸಾಯಿ, ಕೃಷ್ಣಪ್ಪ ಕೊಪ್ಪದ, ಎಸ್‌ಡಿಎಂಸಿ ಅಧ್ಯಕ್ಷ ವಿರೂಪಾಕ್ಷಪ್ಪ ಮೂಡಿ, ನಾಗಪ್ಪ ಬಿಷ್ಠಣ್ಣನವರ ಉಪಸ್ಥಿತರಿದ್ದರು. ಆರ್.ಜಿ. ಅತ್ತೀಕಟ್ಟಿ ಸ್ವಾಗತಿಸಿದರು. ಸಿ.ಎಸ್. ಸರ್ವಿ ಕಾರ್ಯಕ್ರಮ ನಿರೂಪಿಸಿದರು. ಬಿ.ಎಂ. ಪಾಟೀಲ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

