ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ರಾಣಿಬೆನ್ನೂರು: ಅನಧಿಕೃತ ಶಾಲೆಗಳು ತಲೆಯೆತ್ತಲು ಹಾಗೂ ಸರ್ಕಾರಿ ಶಾಲೆಗಳಿಗೆ ಬರುವ ಮಕ್ಕಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಲು ಕಾರಣರಾದ ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಮುಖಂಡ ಮಂಜುನಾಥ ದುಗ್ಗತಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತವಾಗಿ ಖಾಸಗಿ ಶಾಲೆಗಳು ಪ್ರಭಾವಿ ವ್ಯಕ್ತಿಗಳಿಂದ ಅನುಮತಿ ಇಲ್ಲದೆ ಆರಂಭವಾಗಿವೆ. ಇದು ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖೆ ಕಡಿಮೆಯಾಗಲು ಕಾರಣ. ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂ. 17ರಲ್ಲಿ 260 ಮಕ್ಕಳ ದಾಖಲಾತಿ ಇದ್ದು, ಹಾಜರಾತಿ ಮಾತ್ರ ಕೇವಲ 120. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದ ಅವರು, ಇದು ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.
ಸರ್ಕಾರ ಕೂಡಲೇ ಕ್ರಮ ಜರುಗಿಸಿ ಅನಧಿಕೃತ ಶಾಲೆಗಳನ್ನು ಮುಚ್ಚಿ, ಸರ್ಕಾರಿ ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

