ಇಂದು ಸಭೆ
ಬ್ಯಾಡಗಿ: ವೀರಶೈವ ಪಂಚಮಸಾಲಿ ಹಾಗೂ ಹರಸೈನ್ಯ ತಾಲೂಕು ಘಟಕದ ಸಭೆಯನ್ನು ಫೆ. 3ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಶೇಖಣ್ಣ ಗಡಾದ ಅವರ ತೋಟದ ಮನೆಯಲ್ಲಿ ಕರೆಯಲಾಗಿದೆ. ಈ ಕುರಿತು ಘಟಕದ ಅಧ್ಯಕ್ಷ ವೀರಭದ್ರಗೌಡ ಹೋಮ್ಮರಡಿ ಪ್ರಕಟಣೆ ನೀಡಿದ್ದು, ಸಭೆಯಲ್ಲಿ ಜಿಲ್ಲಾಧ್ಯಕ್ಷ ಎಸ್.ಆರ್. ಅಂಗಡಿ, ತಾಲೂಕಾಧ್ಯಕ್ಷ ನಾಗನಗೌಡ ಪಾಟೀಲ ಸಭೆಯಲ್ಲಿ ಉಪಸ್ಥಿತರಿವರು. ತಾಲೂಕಿನ ಎಲ್ಲ ಗ್ರಾಮ ಘಟಕಗಳ ಪದಾಧಿಕಾರಿಗಳು ಹಾಗೂ ಸಮಾಜದ ಬಾಂಧವರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ನಾಳೆ ಆರೊಗ್ಯ ತಪಾಸಣೆ
ಹಾನಗಲ್ಲ: ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 0-6 ವರ್ಷದ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆಯ ಕಾರ್ಯಕ್ರಮವನ್ನು ಫೆ. 4ರಿಂದ 8ರವರೆಗೆ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಎಲ್ಲ ಗ್ರಾಮದಘಲ್ಲಿರವು 0-6 ವರ್ಷದ ಮಕ್ಕಳ ಪಾಲಕರು ತಮ್ಮ ಮಕ್ಕಳನ್ನು ಹಾಗೂ ಗರ್ಭಿಣಿಯರು ಹಾಗೂ ಬಾಣಂತಿಯರೂ ಸಹ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಂದ ಆರೋಗ್ಯ ತಪಾಸಣೆ ಮಾಡಿಸುವಂತೆ ಕೋರಲಾಗಿದೆ. ಈಗಾಗಲೇ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ತೂಕ ಮಾಡುವ ಕಾರ್ಯಕ್ರಮ ಜಾರಿಯಲ್ಲಿದ್ದು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಬಿ.ಆರ್. ಶೆಟ್ಟರ್, ತಾಲೂಕಾ ವೈದ್ಯಾಧಿಕಾರಿ ಡಾ. ಮಮತಾ ಪಾಟೀಲ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಇಂದು ಪದಾಧಿಕಾರಿಗಳ ಆಯ್ಕೆ ಸಭೆ
ಹಾವೇರಿ: ಸವಣೂರು ತಾಲೂಕು ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆ ಫೆ. 3ರಂದು ಮಧ್ಯಾಹ್ನ 3ಗಂಟೆಗೆ ಸ್ಥಳೀಯ ಬಾರಕೇರ ಓಣಿಯ ಶ್ರೀರಾಮದೇವ ದೇವಸ್ಥಾನದಲ್ಲಿ ಜರುಗಲಿದೆ. ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಶಿವಶಂಕರ ಬಾರ್ಕಿ ವಹಿಸುವರು. ತಾಲೂಕಿನ ಸಮಾಜ ಬಾಂಧವರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಶಿವಣ್ಣನವರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಚೌಡಯ್ಯ ಜಯಂತಿ
ಹಾವೇರಿ: ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಗಂಗಾಮತ ಸಮಾಜದ ಸೇವಾ ಸಮಿತಿಯಿಂದ ಇತ್ತೀಚೆಗೆ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಅಶೋಕಾನಂದ ವಡ್ನಿಕೊಪ್ಪ ವಹಿಸಿದ್ದರು. ನೀಲಪ್ಪ ಜಿಡ್ಡಿ, ನಿಂಗಪ್ಪ ಸೊಪ್ಪಿನ, ಮಾಲತೇಶ ರಿತ್ತಿ, ನಿಂಗಪ್ಪ ಸುಣಗಾರ, ಗಂಗಪ್ಪ ಅಂಬಿಗೇರ, ರಾಜು ಕುರವತ್ತಿ, ಷಣ್ಮುಖ ಕಡಕೋಳ, ಪ್ರಕಾಶ ಮಡ್ಲೇರಿ, ಪ್ರಶಾಂತ ಬಾರ್ಕಿ, ಸುಧಾಮ ಅಂಬಿಗೇರ, ಬಸವರಾಜ ಹುಲ್ಲೂರ, ಯಶವಂತ ಬಿಷ್ಟಣ್ಣನವರ, ಚಂದ್ರು ಸುಣಗಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

