ಹಾವೇರಿ

ಮಹಿಳೆಯರಿಗೆ ಆತ್ಮಸ್ಥೈರ್ಯ ಮುಖ್ಯ: ಉದಾಸಿ

Published On :

ಹಾನಗಲ್: ಪುರುಷರಿಗಿಂತ ಮಹಿಳೆಯರು ತಮ್ಮ ದಿನನಿತ್ಯದ ಕೌಟುಂಬಿಕ ಹಣಕಾಸಿನ ವ್ಯವಹಾರದಲ್ಲಿ ಭಾಗಿಯಾಗಿ ಮನೆತನದ ಜವಾಬ್ದಾರಿ ಸರಿದೂಗಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹ ಮಹಿಳೆಯರಿಗೆ ಆತ್ಮಸ್ಥೈರ್ಯ ನೀಡಿ ಆರ್ಥಿಕ ಉನ್ನತಿಗೆ ಶ್ರಮಿಸುತ್ತಿದೆ ಎಂದು ಮಾಜಿ ಸಚಿವ ಸಿ.ಎಂ. ಉದಾಸಿ ಹೇಳಿದರು.
ತಾಲೂಕಿನ ನರೇಗಲ್ಲ ಗ್ರಾಮದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಏರ್ಪಡಿಸಿದ್ದ ನರೇಗಲ್ಲ, ಕೂಡಲ ಹಾಗೂ ವರ್ದಿ ಮಹಿಳಾ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ ಮಹಿಳೆಯರು ಇಂಥ ಒಂದು ಯೋಜನೆಯಿಂದ ಜೀವನ ನಿರ್ವಹಣೆಗೆ ಹಣ ಸಂಗ್ರಹದ ಜೊತೆಗೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಇದರಿಂದ ಆ ಮಕ್ಕಳಿಗೆ ಬದುಕು ಕಟ್ಟಿಕೊಟ್ಟಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಕೋಲಾಟ, ಜನಪದಗೀತೆ, ರಂಗೋಲಿ, ಕವಾಲಿ ಇನ್ನಿತರ ಸ್ವರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಕೂಡಲದ ಶ್ರೀಗುರುನಂಜೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಶಾಂತವ್ವ ಗೋದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷೆ ಗೀತಾ ಅಂಕಸಖಾನಿ, ಎಪಿಎಂಸಿ ಅಧ್ಯಕ್ಷ ಬಿ.ಎಸ್. ಅಕ್ಕೀವಳ್ಳಿ, ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್. ಬಳ್ಳಾರಿ, ಯೋಜನಾಧಿಕಾರಿ ಕೆ. ಸದಾನಂದ, ಶಿಲ್ಪಾ ಹರಿಜನ, ಮಾಲತೇಶ ಸೊಪ್ಪಿನ ಪಾಲ್ಗೊಂಡಿದ್ದರು. ಎಂ. ಗಿರೀಶ ಸ್ವಾಗತಿಸಿದರು, ಕೆ. ಧನಂಜಯ ಕಾರ್ಯಕ್ರಮ ನಿರೂಪಿಸಿದರು. ಚಂದ್ರಪ್ಪ ಹೋತನಹಳ್ಳಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.