ಜೆಡಿಎಸ್ ಅಧಿಕಾರಕ್ಕೆ ತನ್ನಿ: ಎಂ.ಎಚ್. ಬೆಂಡಿಗೇರಿ
ಶಿಗ್ಗಾಂವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಆಂತರಿಕ ಕಚ್ಚಾಟದಿಂದ ವಿನಾಶದ ಅಂಚಿನಲ್ಲಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಯುವ ಕಾರ್ಯಕರ್ತರು ಪಕ್ಷ ಬಲವರ್ಧನೆಗೆ ಶ್ರಮಿಸಿ ಜೆಡಿಎಸ್ ಅಧಿಕಾರಕ್ಕೆ ತರಬೇಕೆಂದು ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಎಂ.ಎಚ್. ಬೆಂಡಿಗೇರಿ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಜೆಡಿಎಸ್ ಆಡಳಿತಾವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮನೆ ಮನೆಗೆ ಪ್ರಚಾರ ಮಾಡುವ ಮೂಲಕ ಗ್ರಾಮ ಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸಿ. ಕಾರ್ಯಕರ್ತರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸಹಜ. ಇದನ್ನು ಮರೆತು ಸಂಘಟಿತರಾಗಿ ಪಕ್ಷಕ್ಕೆ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು. ರೈತ ಹೋರಾಟ ಸಮಿತಿ ಮುಖಂಡ ಬಾಬಣ್ಣ ಅಗಡಿ ಮಾತನಾಡಿ, ಯಾವ ಮುಖ್ಯಮಂತ್ರಿಗಳೂ ಮಾಡದ ಗ್ರಾಮ ವಾಸ್ತವ್ಯದ ಮೂಲಕ ಗ್ರಾಮೀಣ ಜನರ ಸಮಸ್ಯೆಗೆ ನ್ಯಾಯ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶ್ರಮಿಸಿದ್ದಾರೆ. ತಾಲೂಕು ಜೆಡಿಎಸ್ ಅಧ್ಯಕ್ಷ ಬಸವರಾಜ ಹಾವೇರಿ, ಮುಖಂಡರಾದ ಶ್ರೀಕಾಂತ ಪೂಜಾರ, ಇಸಾಕ್ ಪಟೇಲ, ರುದ್ರಗೌಡ ಪೊಲೀಸ್‌ಪಾಟೀಲ, ಚಂದ್ರಶೇಖರ ಆದವಾನಿಮಠ, ಎಸ್.ವಿ.ಪವಾರ, ಜ್ಯೋತಿ ಲಮಾಣಿ, ಮಂಜುಳಾ ತಳವಾರ, ಎಸ್.ಸಿ. ಹಿರೇಮಠ, ಕೃಷ್ಣ ಚೌಡಾಳ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

