ಹಾವೇರಿ

ವಿಎಸ್ಸೆಸ್ ಬ್ಯಾಂಕ್ ಆರಂಭಿಸಿ

Published On :

ಹಿರೇಕೆರೂರು: ತಾಲೂಕಿನ ಗಡಿ ಗ್ರಾಮ ಅಣಜಿಯ ರೈತರ ಜೀವನಾಡಿಯಾಗಿರುವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಆರು ತಿಂಗಳಿಂದ ಮುಚ್ಚಿದ್ದು, ಈ ಭಾಗದ ರೈತರಿಗೆ ತೀವ್ರ ತೊಂದರೆಯಾಗಿದೆ ಎಂದು ಗ್ರಾಮದ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಎಸ್.ಎಂ. ಶಿವಾನಂದ ದೂರಿದ್ದಾರೆ. ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಮಧ್ಯೆ ಕಳೆದ ಒಳಜಗಳ ಆರಂಭವಾಗಿ ಬ್ಯಾಂಕಿನ ಕಾರ್ಯ ಚಟುವಟಿಕೆ ಸ್ಥಗಿತಗೊಂಡಿದೆ. ಇದರಿಂದ ಸುತ್ತಲಿನ ರೈತರಿಗೆ ಸಾಲಸೌಲಭ್ಯ ಸಿಗುತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಒಳಜಗಳದಿಂದಾಗಿ ಬ್ಯಾಂಕು ಮುಚ್ಚಿದೆ. ಮೇಲಧಿಕಾರಿಗಳು ಅಣಜಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮತ್ತೆ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.