ಹಾವೇರಿ

ಕೊಳವೆಬಾವಿಯಲ್ಲಿ ನೀರು: ಮಾಸೂರಲ್ಲಿ ಹಬ್ಬದ ಸಡಗರ

Published On :

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಫೆ. 11
ತಾಲೂಕಿನ ಮಾಸೂರ ಗ್ರಾಮದಲ್ಲಿ ಬುಧವಾರ ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆ ಬಾವಿಯಲ್ಲಿ ನೀರುಕ್ಕಿದ್ದು, ಗ್ರಾಮಸ್ಥರಲ್ಲಿ ಹಬ್ಬದ ವಾತಾವರಣ ಮೂಡಿಸಿದೆ.
ಸುಮಾರು 15 ಸಾವಿರ ಜನಸಂಖ್ಯೆ ಇರುವ ಮಾಸೂರು ಗ್ರಾಮದಲ್ಲಿ ಕುಡಿಯುವ ನೀರಿನ ಶಾಶ್ವತ ವ್ಯವಸ್ಥೆ ಇರಲಿಲ್ಲ. ಈ ಹಿಂದೆ ಕೊರೆಸಿದ ಕೊಳವೆಬಾವಿಗಳು ಅಂತರ್ಜಲ ಕೊರತೆಯಿಂದ ವ್ಯರ್ಥವಾಗಿದ್ದವು. ಗ್ರಾಪಂ ಹಣ ಪೋಲಾಗಿ, ಗ್ರಾಮಸ್ಥರೂ ಚಿಂತಾಕ್ರಾಂತರಾಗಿದ್ದರು.
ಆದರೆ, ಗ್ರಾಮದ ಸರ್ವಜ್ಞ ಪ್ಲಾಟಿನ ಮಾರುತಿ ದೇವಸ್ಥಾನದ ಎದುರು ಕೊರೆಸಿದ ಕೊಳವೆ ಬಾವಿಯಲ್ಲಿ 4 ಇಂಚು ನೀರು ಬೀಳುವ ಮೂಲಕ ಸಂಭ್ರಮ ಮೂಡಿಸಿದೆ. ಗ್ರಾಪಂ ಅಧ್ಯಕ್ಷ ಚನ್ನಬಸಪ್ಪ ರಾಮಜ್ಜನವರ ಮಾತನಾಡಿ, ವಿದ್ಯುತ್ ತೊಂದರೆ ಹಾಗೂ ಹಾಲಿ ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿದ್ದರಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ತೊಂದರೆಯಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಕೊಪ್ಪದಕೇರಿ ದುರ್ಗಾದೇವಿ ಜಾತ್ರಾ ಮಹೋತ್ಸವ ಫೆ. 18ರಿಂದ 5 ದಿನಗಳ ಕಾಲ ಜರುಗುತ್ತಿದ್ದು, ಗ್ರಾಮಸ್ಥರಿಗೆ ಹಾಗೂ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಕುಡಿಯುವ ನೀರು ಒದಗಿಸುವುದು ಗ್ರಾಪಂಗೆ ದೊಡ್ಡ ಸವಾಲಾಗಿತ್ತು. ಆದರೆ ಈ ಕೊಳವೆಬಾವಿಯಲ್ಲಿ 4 ಇಂಚು ನೀರು ಬೀಳುವ ಮೂಲಕ ನೆಮ್ಮದಿ ತಂದಿದೆ ಎಂದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ರು. 60 ಲಕ್ಷ ವೆಚ್ಚದ ಕ್ರಿಯಾ ಯೋಜನೆಯಂತೆ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಹಂತ ಹಂತವಾಗಿ ಗ್ರಾಮದ ಎಲ್ಲ ರಸ್ತೆಗಳನ್ನು, ಚರಂಡಿಗಳನ್ನು ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ತಾಪಂ ಸದಸ್ಯ ಆರ್.ಎನ್. ಗಂಗೋಳ, ಬಸವರಾಜ ಗಿರಿಯಣ್ಣನವರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.