ನೀರು ಬಿಡುಗಡೆ: ಆತ್ಮವಿಮರ್ಶೆ ಮಾಡಿಕೊಳ್ಳಲಿ
ಬ್ಯಾಡಗಿ: ತನ್ನ ನಿಲುವು ಮಂಡಿಸುವಲ್ಲಿ ವಿಫಲವಾಗಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದನ್ನು ಆತ್ಮವಿಮರ್ಶೆ ಮಾಡಿಕೊಳ್ಳಲಿ, ಜನರ ಹಿತಾಸಕ್ತಿ ಕಾಪಾಡಲು ಅನಗತ್ಯ ರಾಜಕೀಯ ಬೇಡ ಎಂದು ಮಾಜಿ ಸಚಿವ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
ಕೇಂದ್ರದತ್ತ ಬೆರಳು ತೋರಿಸಬೇಡಿ: ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಬೇಸಿಗೆಯಲ್ಲಿ ಸಾಂಬಾ ಬೆಳೆಗೆ ಅನುಮತಿ ನೀಡಿದ್ದನ್ನು ನ್ಯಾಯಾಧಿಕರಣದ ಮುಂದೆ ಆಕ್ಷೇಪಿಸದಿರುವ ಶೆಟ್ಟರ್ ಸರ್ಕಾರ ಇದೀಗ ನೀರು ಬಿಟ್ಟು ಕೇಂದ್ರದ ಕಡೆ ಕೈತೋರಿಸುವುದನ್ನು ಬಿಡಬೇಕೆಂದು ಆಗ್ರಹಿಸಿದರು.
ಹೊಣೆ ಹೊತ್ತು ರಾಜಿನಾಮೆ ನೀಡಿ: ನೀರಾವರಿ ಆಧಾರಿತ ಕೃಷಿಭೂಮಿಯಲ್ಲಿನ ಎರಡನೇ ಬೆಳೆಗೆ ನೀರು ಕೊಡಲು ಸಾಧ್ಯವಿಲ್ಲ. ಬೇಸಿಗೆಯಲ್ಲಿ ಬಿತ್ತನೆ ಮಾಡದಂತೆ ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಆದೇಶ ಹೊರಡಿಸಿದ್ದು, ಯಾರ ಹಿತಾಸಕ್ತಿ ಕಾಪಾಡಲು ಎಂದು ಪ್ರಶ್ನಿಸಿದ ಅವರು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜಿನಾಮೆ ನೀಡುವಂತೆ ಆಗ್ರಹಿಸಿದರು.
ಯಾವುದೇ ಕ್ಷಣದಲ್ಲಿ ಚುನಾವಣೆ: ಎಸ್.ಆರ್. ಪಾಟೀಲ ಮಾತನಾಡಿ, ಬಲ ಪ್ರದರ್ಶನದಲ್ಲಿ ತೊಡಗಿರುವ ಬಿಜೆಪಿ ಮತ್ತು ಕೆಜೆಪಿ ಸರ್ಕಾರವನ್ನು ವಿಸರ್ಜಿಸಲು ಮುಂದಾಗಿವೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾಗಬಹುದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗುವಂತೆ ಕರೆ ನೀಡಿದರು.
ಸಮಾವೇಶಕ್ಕೆ ಸಕಲ ಸಿದ್ಧತೆ: ಎಸ್.ಆರ್. ಶಿಡೇನೂರು ಮಾತನಾಡಿ, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆ. 13ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮಾವೇಶಕ್ಕೆ ಸುಮಾರು 15ರಿಂದ 20 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ, ಸಿದ್ಧರಾಮಯ್ಯ, ಎಚ್.ಕೆ. ಪಾಟೀಲ, ಬಸವರಾಜ ರಾಯರಡ್ಡಿ, ಶಾಮನೂರು ಶಿವಶಂಕರಪ್ಪ, ಸಿ.ಎಂ. ಇಬ್ರಾಹಿಂ, ಸಂತೋಷ್ ಲಾಡ್, ರಾಜ್ಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮಾಜಿ ಶಾಸಕ ರುದ್ರಪ್ಪ ಲಮಾಣಿ, ತಾಲೂಕಾಧ್ಯಕ್ಷ ಹುಸೇನ್ ಸಾಬ್ ದೊಡ್ಮನಿ, ರಮೇಶ ಸುತ್ತಕೋಟಿ, ಎಸ್.ಎಸ್. ಬೆಲ್ಲದ, ಮಲ್ಲನಗೌಡ ಪಾಟೀಲ, ಇನ್ನಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

