ಹಾವೇರಿ

ಸಮರ್ಪಕ ವಿದ್ಯುತ್‌ಗೆ ಆಗ್ರಹಿಸಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಫೆ. 11
ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಹಾಗೂ ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ರೈತರು ತಹಸೀಲ್ದಾರ್ ಕಚೇರಿ ಬಳಿ ಇರುವ ಸಿದ್ಧೇಶ್ವರ ದೇವಸ್ಧಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು.
ರಾಜ್ಯ ಬಿಜೆಪಿ ಹಾಗೂ ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ಘೋಷಣೆ ಪ್ರತಿಭಟನಾಕಾರರು ಕೂಗಿದರು. ಹೆಸ್ಕಾಂ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ,  ರೈತರ ಪಂಪ್‌ಸೆಟ್‌ಗಳಿಗೆ 3 ಫೇಸ್ ವಿದ್ಯುತ್ ಪೂರೈಸಲು 40ವರ್ಷಗಳ ಹಿಂದೆ ಜೋಡಿಸಿದ ಹಳೆಯ ವಿದ್ಯುತ್ ಲೈನ್‌ಗಳೇ ಇವೆ. ಇವು ಕಡಿಮೆ ಸಾಮರ್ಥ್ಯ ಹೊಂದಿದ್ದು ಹೊಸ ವಿದ್ಯುತ್ ಲೈನ್ ಹಾಗೂ ಹೆಚ್ಚುವರಿ ಸಾಮರ್ಥ್ಯದ ಪರಿವರ್ತಕ ಅಳವಡಿಸುವಂತೆ ಒತ್ತಾಯಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಬಸವರಾಜ ಕಡೂರು ಮಾತನಾಡಿ, ವಿದ್ಯುತ್ ಕಂಬ ಮತ್ತು ಪರಿವರ್ತಕ ಹಳೆಯದಾಗಿರುವುದರಿಂದ ಓವರ್ ಲೋಡ್ ಆಗುತ್ತಿದೆ. ಇದರಿಂದ ರೈತರ ಪಂಪ್‌ಸೆಟ್‌ಗಳು ಸುಡುತ್ತಿವೆ. ಹೀಗಾಗಿ ರೈತರು ಲಾಭಕಿಂತ ಹಾನಿಯನ್ನೇ ಹೆಚ್ಚಾಗಿ ಅನುಭವಿಸುವಂತಾಗಿದೆ ಎಂದು ದೂರಿದರು. ಮನವಿ ಸ್ವೀಕರಿಸಿದ ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಈರಣ್ಣ ಮಾತನಾಡಿ, ಈ ಕುರಿತಂತೆ ಬದಲಾವಣೆ ಕಾರ್ಯ ನಡೆದಿದೆ. ಬೇಸಿಗೆ ಮುಗಿಯುವುದರೊಳಗಾಗಿ ಎಲ್ಲ ಲೈನ್‌ಗಳನ್ನು ಬದಲಾಯಿಸುವ ಭರವಸೆ ನೀಡಿದರು. ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.