ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ
ರಾಣಿಬೆನ್ನೂರು: ಯುವ ಜನತೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸ್ವಯಂ ಪ್ರೇರಣೆಯಿಂದ ಶೋಷಿತರ, ದೀನ-ದಲಿತರ, ಗಾಯಾಳುಗಳ ಸೇವೆಯನ್ನು ಮಾಡಬೇಕೆಂದು ಜಿಲ್ಲಾ ರೆಡ್‌ಕ್ರಾಸ್ ಸಂಸ್ಧೆಯ ಗೌರವ ಕಾರ್ಯದರ್ಶಿ ಎಂ.ಸಿ. ಕೊಳ್ಳಿ ಹೇಳಿದರು.
ಇಲ್ಲಿನ ಆರ್‌ಟಿಇಎಸ್ ಕಾಲೇಜಿನ ಸಾಹುಕಾರ ಸಭಾಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್‌ನ ತಾಲೂಕು ಯುವ ಘಟಕ ಉದ್ಘಾಟಿಸಿ ಮಾತನಾಡಿ, ದೇಶದ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಯ ಲಾಭವನ್ನು ಯಾವುದೇ ಫಲಾಫೇಕ್ಷೆ ಇಲ್ಲದೇ ಸಾರ್ವಜನಿಕರಿಗೆ ತಲುಪಿಸಲು ಅನೇಕ ಸ್ವಯಂಸೇವಾ ಸಂಸ್ಧೆಗಳು ನಿತ್ಯ ಶ್ರಮಿಸುತ್ತಿವೆ. ಅಂಥ ಸಂಸ್ಥೆಗಳಲ್ಲಿ ರೆಡ್‌ಕ್ರಾಸ್ ಸಂಸ್ಥೆ ಅಗ್ರಗಣ್ಯವಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಸುಭಾಸ್ ಸಾಹುಕಾರ ಉದ್ಘಾಟಿಸಿದರು. ಪ್ರಾಚಾರ್ಯ ಎಸ್.ಎಂ.ಬಾಗಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಧುರಿ ದೇವಧರ, ಪ್ರೊ. ಎಫ್.ಎಚ್. ಮಾಚೇನಹಳ್ಳಿ, ಸಹಜಾ ನಾಯಕ, ಸೌಜನ್ಯಾ ಜೋಶಿ, ಪ್ರೊ. ಎಂ.ವಿ. ಹಿತ್ತಲಮನಿ, ಮೇಘರಾಜ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

