ಇಂದು ರ್ಯಾಂಕ್ ವಿಜೇತರಿಗೆ ಪದಕ ಪ್ರದಾನ
ಹಾನಗಲ್ಲ: ಶಿಕ್ಷಕ-ವಿದ್ಯಾರ್ಥಿ ಸಂಘ, ವಿವಿಧ ವಿಷಯವಾರು ಸಂಘಗಳ ಉದ್ಘಾಟನೆ ಹಾಗೂ ರ್ಯಾಂಕ್ ವಿಜೇತರಿಗೆ ಪದಕ ಪ್ರದಾನ ಹಾಗೂ ಕವನ ಸಂಕಲನ ಬಿಡುಗಡೆ ಸಮಾರಂಭ ಫೆ. 16ರಂದು ಪಟ್ಟಣದ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿವೆ. ಅಂದು ಬೆಳಗ್ಗೆ 10ಕ್ಕೆ ನಡೆಯುವ ಸಮಾರಂಭದಲ್ಲಿ ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಸಚಿವ ಸಿ.ಎಂ. ಉದಾಸಿ ಅಧ್ಯಕ್ಷತೆ ವಹಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎ.ಎನ್. ಪಾಟೀಲ್, ಡಯಟ್ ಪ್ರಾಚಾರ್ಯ ಎಂ.ಡಿ. ಬಳ್ಳಾರಿ, ನಿವೃತ್ತ ಪ್ರಾಚಾರ್ಯ ಎ.ಎಂ. ಅಕ್ಕಿ, ನಿವೃತ್ತ ಅಧೀಕ್ಷಕ ಆರ್. ಚಂದ್ರಶೇಖರ, ಶ್ರೀ ಕುಮಾರೇಶ್ವರ ವಿದ್ಯಾವರ್ಧಕ ಟ್ರಸ್ಟ್ ನಿರ್ದೇಶಕರುಗಳಾದ ಎನ್.ಜಿ. ಕುಂಬಾರಿ, ಜಿ.ಎಸ್. ಕೊಂಡೋಜಿ, ಬಿಇಡಿ ಕಾಲೇಜು ಪ್ರಾಚಾರ್ಯ ಎನ್. ಸದಾಶಿವಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು.
ಇದೇ ಸಂದರ್ಭ ಕವಿವಿ ದ್ವಿತೀಯ ರ್ಯಾಂಕ್ ವಿಜೇತೆ ರಾಧಿಕಾ ಕಾನಳ್ಳಿ ಅವರನ್ನು ಸನ್ಮಾನಿಸಲಾಗುವುದು ಜೊತೆಗೆ ರವೀಂದ್ರ ಕುರಿಯವರ್ ಅವರ ನಿನಾದ ಕವನ ಸಂಕಲನ ಬಿಡುಗಡೆಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

