ಹಾವೇರಿ

ನಾಳೆ ಜಯಂತ್ಯುತ್ಸವ, ಕುಂಚಿಟಿಗರ ಸಮಾವೇಶ

Published On :

ಹಾನಗಲ್ಲ: ವಿಜಯರಾಜ ಸಂಗಮೇಶ್ವರರ 24ನೇ ಜಯಂತ್ಯುತ್ಸವ ಹಾಗೂ ಕುಂಚಿಟಿಗರ(ಕಮಾಟಿ) ರಾಜ್ಯ ಸಮಾವೇಶ ಫೆ. 17ರಂದು ಹಾನಗಲ್ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಹೊಸದುರ್ಗದ ಕುಂಚಿಟಿಗ ಸಂಸ್ಥಾನದ ಶಾಂತವೀರ ಶ್ರೀಗಳು ನೇತೃತ್ವ ವಹಿಸುವರು. ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾಶರಣರು, ಕೊರಟಗೆರೆ ಹನುಮಂತನಾಥ ಶ್ರೀ, ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧರಾಜಯೋಗೀಂದ್ರ ಶ್ರೀ, ಹೊಸದುರ್ಗ ಭಗಿರಥಪೀಠದ ಪುರುಷೋತ್ತಮಾನಂದಪುರಿ ಶ್ರೀ, ಕಾಗಿನೆಲೆ ನಿರಂಜನಾನಂದಪುರಿ ಶ್ರೀ, ಸುರೇಶ್ವರಾನಂದ ಭಾರತಿ ಶ್ರೀ, ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಸಾನ್ನಿಧ್ಯ ವಹಿಸುವರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಕುಂಚಿಟಿಗ ಸಂಘ ಉದ್ಘಾಟಿಸುವರು. ವಿಪಕ್ಷ ಉಪನಾಯಕ ಟಿ.ಬಿ. ಜಯಚಂದ್ರ ಸಮಾವೇಶ ಉದ್ಘಾಟಿಸುವರು. ಮಾಜಿ ಸಚಿವ ಸಿ.ಎಂ. ಉದಾಸಿ ಶ್ರೀಗಳ ಭಾವಚಿತ್ರ ಬಿಡುಗಡೆಗೊಳಿಸುವರು. ಅಬಕಾರಿ ಸಚಿವ ರೇಣುಕಾಚಾರ್ಯ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ಹಾನಗಲ್ಲ ಕುಂಚಿಟಿಗ ಸಮಾಜದ ಅಧ್ಯಕ್ಷ ಮಂಜುನಾಥ ನಾಗಜ್ಜನವರ ಅಧ್ಯಕ್ಷತೆ ವಹಿಸುವರು. ಸಚಿವ ಸಿ.ಟಿ. ರವಿ, ಸಂಸದ ಶಿವಕುಮಾರ ಉದಾಸಿ, ಬಿ.ವೈ. ರಾಘವೇಂದ್ರ, ಜಿ.ಎಂ. ಸಿದ್ಧೇಶ್ವರ, ಶಾಸಕ ಗೂಳಿಹಟ್ಟಿ ಶೇಖರ್, ಬಿ.ಸಿ. ಪಾಟೀಲ, ಎಂ. ಚಂದ್ರಪ್ಪ, ಯು.ಬಿ. ಬಣಕಾರ, ವಿಧಾನಸಭೆ ಮಾಜಿ ಉಪಸಭಾಪತಿ ಮನೋಹರ ತಹಸೀಲ್ದಾರ್, ಗಂಗಾಮತ ಸಮಾಜದ ರಾಜ್ಯಾಧ್ಯಕ್ಷ ಬಿ.ಕೆ. ಮೋಹನಕುಮಾರ, ಇತರರು ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾನುವಾರ ಬೆಳಗ್ಗೆ 8.30ಕ್ಕೆ ಪಟ್ಟಣದ ಪ್ರವಾಸಿ ಮಂದಿರದಿಂದ ಕ್ರೀಡಾಂಗಣದವರೆಗೆ ಪೂರ್ಣಕುಂಭಮೇಳ ನಡೆಯಲಿದೆ. 11.30ಕ್ಕೆ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ ಮೂಡ್ಲಿಯವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.