ಸೇವಾಭಾವದಿಂದ ಸಮೃದ್ಧ ಬದುಕು: ಡಾ. ಜೋಶಿ
ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಫೆ.15
ಸಮಾಜದಲ್ಲಿ ಸೇವಾ ಮನೋಭಾವನೆ ಬೆಳೆದಾಗ ಮಾತ್ರ ಪ್ರತಿಯೊಬ್ಬರು ಆರೋಗ್ಯ ಮತ್ತು ಸಮೃದ್ಧಿಯಿಂದ ಬಾಳಲು ಸಾಧ್ಯ. ಈ ಕಾರಣದಿಂದ ಸೇವಾಭಾವ ಬೆಳೆಸಿಕೊಳ್ಳಬೇಕೆಂದು ನೇತ್ರ ತಜ್ಞ ಡಾ. ಎಂ.ಎಂ. ಜೋಶಿ ಅಭಿಪ್ರಾಯಪಟ್ಟರು.
ಪಟ್ಟಣದ ಚನ್ನಪ್ಪ ಕುನ್ನೂರು ಶಿಕ್ಷಣ ಸಂಸ್ಥೆ, ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆಯಲ್ಲಿ ಉಳ್ಳವರು ಸಾವಿರಾರು ರು. ಖರ್ಚು ಮಾಡಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಬಡತನ ರೇಖೆಗಿಂತ ಕೆಳಗಿರುವ ಜನರು ಈ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಿಡುವಿನ ವೇಳೆ ಶಿಬಿರಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾಜಿ ಸಂಸದ ಮಂಜುನಾಥ ಕುನ್ನೂರ ಮಾತನಾಡಿದರು.
ಲೋಕ ಶಿಕ್ಷಣ ಟ್ರಸ್ಟ್ನ ಸದಸ್ಯ ರಾಜಾ ದೇಸಾಯಿ, ಡಾ. ಪಿ.ಆರ್. ಪಾಟೀಲ, ಡಾ. ಬಿ.ಎಚ್. ವೀರಣ್ಣ, ಡಾ. ಎನ್.ಎ. ಮುಲ್ಲಾ, ಪಿ.ವಿ. ಕೋಚಲಾಪುರಮಠ, ವಾಸಪ್ಪ, ಸಿರಾಜ ಅಹ್ಮದ್ ಕುಡಚಿವಾಲೇ, ನಾಗರಾಜ ಗೌರಿ, ರಜತ ಉಳ್ಳಾಗಡ್ಡಿಮಠ, ಇನ್ನಿತರರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಡಾ. ಎಂ.ಎಂ. ಜೋಶಿ, ರಾಜಾ ದೇಸಾಯಿ ಹಾಗೂ ಪಿ.ವಿ. ಕೋಚಲಾಪುರಮಠ ಅವರನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಮುಖಂಡ ರಾಜು ಕುನ್ನೂರು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ನಿರ್ವಹಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

