ಹಾವೇರಿ

ಸಿಎಂ, ಡೆಪ್ಯೂಟಿ ಸಿಎಂ ಭಾವಚಿತ್ರಕ್ಕೆ ಅವಮಾನ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಫೆ.17
ತಾಲೂಕು ಕಚೇರಿ ಆವರಣದಲ್ಲಿ ನಿಲ್ಲಿಸಿದ ನಾಮಫಲಕವೊಂದರಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಭಾವಚಿತ್ರಕ್ಕೆ ಸಗಣಿ ಎಸೆದು ವಿರೂಪಗೊಳಿಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಸಗಣಿ, ಎಸೆದು ವಿರೂಪ: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಿಗೆ ಪ್ರಚಾರ ನೀಡುವ ಸಂದರ್ಭದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆ ಮಂತ್ರಿಗಳ ಫೋಟೋ ಬಳಕೆ ಮಾಡುವುದು ವಾಡಿಕೆ. ಅಂತೆಯೇ ತಾಲೂಕು ಕಚೇರಿ ಆವರಣದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಸ್ಥಾಪನೆ ಕುರಿತ ಮಾಹಿತಿ ಫಲಕ ನಿಲ್ಲಿಸಲಾಗಿದ್ದು. ಎಡ ಭಾಗದಲ್ಲಿ ಜಗದೀಶ ಶೆಟ್ಟರ ಹಾಗೂ ಬಲಭಾಗದಲ್ಲಿ ಈಶ್ವರಪ್ಪ ಅವರ ಫೋಟೋಗಳನ್ನು ಅಳವಡಿಸಲಾಗಿದೆ. ಆದರೆ, ಇವರಿಬ್ಬರ ಫೋಟೋಗಳಿಗೆ ಸಗಣಿ ಎಸೆದು ವಿರೂಪಗೊಳಿಸಲಾಗಿದೆ.
ಖಂಡನೆ: ಮುಖ್ಯಮಂತ್ರಿ ಜಗದೀಶ ಶೆಟ್ಟರ ಹಾಗೂ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಭಾವಚಿತ್ರಕ್ಕೆ ಸಗಣಿ ಎಸೆದು ವಿರೂಪಗೊಳಿಸಿದ ಘಟನೆ ಕುರಿತು ತಾಲೂಕು ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ ಖಂಡಿಸಿದ್ದಾರೆ.
ಬಂಧಿಸಲು ಆಗ್ರಹ: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜನಪ್ರತಿನಿಧಿಗಳನ್ನು ಅವಮಾನಿಸುತ್ತಿರುವ ಅನೇಕ ಘಟನೆಗಳು ರಾಜ್ಯಾದ್ಯಂತ ಯಥೇಚ್ಚವಾಗಿ ನಡೆಯುತ್ತಿವೆ. ಈ ರೀತಿ ಅವಮಾನದ ಘಟನೆ ಜರುಗಿದರೂ ತಾಲೂಕಾಡಳಿತ ನಿರ್ಲಕ್ಷ್ಯ ತೋರುತ್ತಿರುವುದು ದುರದೃಷ್ಟಕರ. ಕೂಡಲೇ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು ಹಾಗೂ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.