ಹಾವೇರಿ

ಇಂದು ಅಹವಾಲು ಸ್ವೀಕಾರ (ಸುದ್ದಿ ಸಂಕ್ಷೇಪ)

Published On :

ಹಾವೇರಿ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಆರು ತಾಲೂಕುಗಳಲ್ಲಿ ಫೆ. 18, 19 ಹಾಗೂ 20ರಂದು ಆಯಾ ತಾಲೂಕು ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಿ, ವಿಚಾರಣೆ ಕೈಕೊಳ್ಳಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಹಾವೇರಿ ವಿಭಾಗದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ಫೆ. 18ರಂದು ಬೆಳಗ್ಗೆ 10ರಿಂದ 1ರ ವರೆಗೆ ಸವಣೂರು ಪ್ರವಾಸಿ ಮಂದಿರದಲ್ಲಿ ಮತ್ತು ಅದೇ ದಿನ ಮಧ್ಯಾಹ್ನ 2ಗಂಟೆಯಿಂದ 5 ಗಂಟೆವರೆಗೆ ಶಿಗ್ಗಾಂವಿ ಪ್ರವಾಸಿ ಮಂದಿರದಲ್ಲಿ, 19ರಂದು ಬೆಳಗ್ಗೆ 10ರಿಂದ 1ರ ವರೆಗೆ ಹಿರೇಕೆರೂರು ಪ್ರವಾಸಿ ಮಂದಿರದಲ್ಲಿ ಮತ್ತು ಅದೇ ದಿನ ಮಧ್ಯಾಹ್ನ 3ರಿಂದ 5ರ ವರೆಗೆ ಹಾನಗಲ್ಲ ಪ್ರವಾಸಿ ಮಂದಿರದಲ್ಲಿ, 20ರಂದು ಬೆಳಗ್ಗೆ 10ರಿಂದ 1ರ ವರೆಗೆ ರಾಣಿಬೆನ್ನೂರು ಪ್ರವಾಸಿ ಮಂದಿರ ಮತ್ತು ಅದೇ ದಿನ ಮಧ್ಯಾಹ್ನ 2ರಿಂದ 5ಗಂಟೆವರೆಗೆ ಬ್ಯಾಡಗಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸುವರು. ಇಚ್ಚಿಕರು ಆಯಾ ದಿನಗಳಂದು ತಮ್ಮ ಸಮಸ್ಯೆ, ದೂರುಗಳನ್ನು ನಿವೇದಿಸಿಕೊಳ್ಳಬಹುದೆಂದು ಕರ್ನಾಟಕ ಲೋಕಾಯುಕ್ತ ಹಾವೇರಿ ವಿಭಾಗ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ಹಾವೇರಿ ತಾಲೂಕಿಗೆ ಸಂಬಂಧಿಸಿದಂತೆ ಯಾವುದಾದರೂ ದೂರು ಅರ್ಜಿಗಳಿದ್ದಲ್ಲಿ ಹಾವೇರಿ ಜಿಲ್ಲಾ ಕೇಂದ್ರದಲ್ಲಿರುವ ಆರಕ್ಷಕ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿಗೆ ಪ್ರತಿದಿನ ಅರ್ಜಿ ಅಥವಾ ದೂರು ಸಲ್ಲಿಸಬಹುದೆಂದು ತಿಳಿಸಿದ್ದಾರೆ.
ನಾಳೆ ಸಮಾವೇಶ
ಹಾವೇರಿ: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಹಂಚಿಕೆ ಕುರಿತಂತೆ ಚರ್ಚಿಸಲು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಸಮಾವೇಶ ಆಯೋಜಿಸುವ ಕುರಿತಂತೆ ಚರ್ಚಿಸಲು ಫೆ. 19ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಮಾಜಿ ಸಚಿವ ಬಸವರಾಜ ಶಿವಣ್ಣನವರ, ಕೆ.ಬಿ. ಕೋಳಿವಾಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಹರ ತಹಸೀಲ್ದಾರ್, ಶಾಸಕ ಬಿ.ಸಿ. ಪಾಟೀಲ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ರುದ್ರಪ್ಪ ಲಮಾಣಿ, ಎಚ್.ಡಿ. ಲಮಾಣಿ, ಇತರರು ಉಪಸ್ಥಿತರಿರುವರು. ಕಾರಣ ಅಭಿಮಾನಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಟಿ.ಎಚ್. ಕಲಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.